
ಹಿರಿಯಡ್ಕ: ಗುರುದೇವ (25) ಎಂಬ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಗುರುದೇವ ಅವರು ಕಳೆದ ಎರಡು ವರ್ಷಗಳ ಹಿಂದೆ ತಮ್ಮ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದರಿಂದ ಮಾನಸಿಕವಾಗಿ ನೊಂದಿದ್ದರು ಎನ್ನಲಾಗಿದೆ. ಅಲ್ಲದೆ, ಅವರು ಯಾವುದೇ ಸ್ಥಿರ ಕೆಲಸ ಮಾಡದೆ ತಿರುಗಾಡುತ್ತಿದ್ದು, ಸಮಯಕ್ಕೆ ಸರಿಯಾಗಿ ಊಟ-ತಿಂಡಿ ಸೇವಿಸದೇ ಮನನೊಂದ ಸ್ಥಿತಿಯಲ್ಲಿದ್ದರು ಎಂದು ತಿಳಿದುಬಂದಿದೆ.
ದಿನಾಂಕ 16-06-2026ರ ರಾತ್ರಿ 11 ಗಂಟೆಯಿಂದ 17-06-2026ರ ಬೆಳಿಗ್ಗೆ 9 ಗಂಟೆಯ ನಡುವಿನ ಅವಧಿಯಲ್ಲಿ ತಮ್ಮ ಮನೆಯ ಮುಂಭಾಗದ ಕೋಣೆಯಲ್ಲಿ ಮೇಲ್ಜಂತಿಗೆ ನೈಲಾನ್ ಸೀರೆಯನ್ನು ಕಟ್ಟಿ ಕುತ್ತಿಗೆಗೆ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಈ ಸಂಬಂಧ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಸಂಖ್ಯೆ 25/2026, ಕಲಂ 194 BNSS ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



