Home Crime ಬಾಲಕಿಗೆ ಲೈಂಗಿಕ ಕಿರುಕುಳ : ಆರೋಪಿ ಬಂಧನ…!!

ಬಾಲಕಿಗೆ ಲೈಂಗಿಕ ಕಿರುಕುಳ : ಆರೋಪಿ ಬಂಧನ…!!

ಬೆಳ್ಳಾರೆ : ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಬೆಳ್ಳಾರೆ ಠಾಣಾ ಪೊಲೀಸರು ಪೊಕ್ಸೊ ಕಾಯ್ದೆಯಡಿ ಬಂಧಿಸಿದ್ದಾರೆ.

ಗಿರಿಧರ ರೈ ಪಜಿಂಬಿಲ ಬಂಧಿತ ಆರೋಪಿ. ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

ಆರೋಪಿ ಗಿರಿಧರ ರೈ ಅ.26ರಂದು ಅಪರಾಹ್ನ 2 ಗಂಟೆ ಸುಮಾರಿಗೆ ಮುರುಳ್ಯ ಗ್ರಾಮದ ನಿಂತಿಕಲ್ಲು ಜಂಕ್ಷನ್‌ನ ಬಸ್ ತಂಗುದಾಣದಲ್ಲಿ ಕುಳಿತಿದ್ದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ.

ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ.