Home Art & Entertainment ಇಂದು ರಾಜ್ಯಾದ್ಯಂತ “ಊರಬ್ಬ” ಚಿತ್ರ ಬಿಡುಗಡೆ…!!

ಇಂದು ರಾಜ್ಯಾದ್ಯಂತ “ಊರಬ್ಬ” ಚಿತ್ರ ಬಿಡುಗಡೆ…!!

ಬೆಂಗಳೂರು: ಸ್ಯಾಂಡಲ್ವುಡ್ನಲ್ಲಿ ಇಂದಿನಿಂದ ಶುರುವಾಗುತ್ತಿದೆ ದೊಡ್ಡ “ಊರಬ್ಬ” ಮಾಗಡಿ ತಾಲ್ಲೂಕಿನ ಸುಪ್ರಸಿದ್ದ ಉಜ್ಜಿನಿ ಚೌಡೇಶ್ವರಿ ಜಾತ್ರೆ, ಅದರ ಹಿನ್ನೆಲೆಯಲ್ಲಿ ನಡೆಯುವ ಕಥೆ ಇಟ್ಟುಕೊಂಡು ನಿರ್ದೇಶಕ ಲಕ್ಕಿ ಶಂಕರ್ “ಊರಬ್ಬ” ಎಂಬ ಚಿತ್ರವನ್ನು ಸಿದ್ಧಪಡಿಸಿದ್ದಾರೆ. ಇಂದು ಊರಬ್ಬ ಸಿನಿಮಾ ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ. ಈ ಚಿತ್ರ ತುಂಬಾ ಉತ್ತಮವಾಗಿ ಮೂಡಿ ಬಂದಿದೆ.ಚಿತ್ರದ ಟ್ರೇಲರ್ ತುಂಬಾ ಸದ್ದು ಮಾಡಿದೆ.

ಒನ್ಸ್ ಮೋರ್ ಕೌರವ ಖ್ಯಾತಿಯ ನರೇಶ್ ಗೌಡ, ತನಿಷಾ ಕುಪ್ಪಂಡ, ದೊಡ್ಡಣ್ಣ, ಮಿಮಿಕ್ರಿ ಗೋಪಿ, ಬಿರಾದಾರ್, ಸಿದ್ದು ಮೂಲಿಮನಿ, ಮಿತ್ರ, ಪಾಯಲ್ ಚಂಗಪ್ಪ, ಡಾ. ನಂಜಪ್ಪ, ಅರವಿಂದ್ ರಾವ್ ಮುಂತಾದವರು ನಟಿಸಿದ್ದಾರೆ. ಅಕ್ಷಯ್ ಎಸ್. ರಿಷಭ್ ಸಂಗೀತ ನೀಡಿದ್ದಾರೆ. ಆರ್.ಡಿ. ರವಿ ಅವರು ಸಂಕಲನ ಮಾಡಿದ್ದಾರೆ.

ಸಸ್ಪೆನ್ಸ್ ಥ್ರಿಲ್ಲರ್ ಕಥೆ ಇರುವ ‘ಊರಬ್ಬ’ ಸಿನಿಮಾದ ಟ್ರೇಲರ್ ಬಿಡುಗಡೆ ಆಗಿದೆ. ಮಾಗಡಿ ತಾಲೂಕಿನ ಸುಪ್ರಸಿದ್ದ ಉಜ್ಜಿನಿ ಚೌಡೇಶ್ವರಿ ಜಾತ್ರೆ ಮತ್ತು ಅದರ ಹಿನ್ನೆಲೆಯಲ್ಲಿ ನಡೆಯುವ ಕಥೆ ಇಟ್ಟುಕೊಂಡು ನಿರ್ದೇಶಕ ಲಕ್ಕಿ ಶಂಕರ್ ಅವರು ಈ ಸಿನಿಮಾ ಮಾಡಿದ್ದಾರೆ. ಒನ್ಸ್ ಮೋರ್ ಕೌರವ ಖ್ಯಾತಿಯ ನರೇಶ್ ಗೌಡ, ತನಿಷಾ ಕುಪ್ಪಂಡ , ಸಿದ್ದು ಮೂಲಿಮನಿ, ಪಾಯಲ್ ಚಂಗಪ್ಪ ಅವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ವಿಶೇಷ ಏನೆಂದರೆ ಉಜ್ಜನಿ ಜಾತ್ರೆಯ ನೈಜ ದೃಶ್ಯಗಳನ್ನು ಈ ಸಿನಿಮಾದಲ್ಲಿ ತೋರಿಸಲಾಗುತ್ತದೆ. ಎಂ.ಡಿ. ಶ್ರೀಧರ್, ಹೆಚ್. ವಾಸು, ಎ.ವಿ. ಕೃಷ್ಣಕುಮಾರ್, ಬಾಹುಬಲಿ, ಈಶ್ವರ್ ಹೀಗೆ ಐವರು ಸೇರಿ ಎಂಟು ಕ್ಯಾಮೆರಾ ಬಳಸಿ ಜಾತ್ರೆ ದೃಶ್ಯವನ್ನು ಸೆರೆಹಿಡಿದಿದ್ದಾರೆ. ಟ್ರೇಲರ್ ಬಿಡುಗಡೆ ಸಂದರ್ಭದಲ್ಲಿ ನಿರ್ದೇಶಕ ಲಕ್ಕಿ ಶಂಕರ್ ಅವರು ಮಾಹಿತಿ ನೀಡಿದ್ದಾರೆ.

ಇದು ನಾನು ಮಾಡಿದ್ದಲ್ಲ, ಆ ಚೌಡೇಶ್ವರಿಯೇ ಮಾಡಿಸಿದ್ದು. ಆಕೆಯ ಶಕ್ತಿಯನ್ನು ನಂಬಿ ಈ ಸಿನಿಮಾ ಮಾಡಿದ್ದೇನೆ. ಹಿಂದಿನಿಂದ ಕಂಟೆಂಟ್ ಬೇಸ್ ಸಿನಿಮಾಗಳನ್ನೇ ಮಾಡಿಕೊಂಡು ಬಂದಿದ್ದೇನೆ. ಏನಾದರೂ ಭಿನ್ನವಾಗಿ ಮಾಡೋಣ ಎಂದಾಗ ಈ ಕಾನ್ಸೆಪ್ಟ್ ಹೊಳೆಯಿತು. ಶೂಟಿಂಗ್ ಮಾಡುವಾಗ ಊರ ಜನರ ಸಹಕಾರ ತುಂಬಾ ಇತ್ತು. ಈ ಥರದ ಪ್ರಾಜೆಕ್ಟ್ ಮಾಡಲು ನಿರ್ಮಾಪಕ ನರೇಶ್ ಗೌಡ ಅವರು ಸಾಥ್ ನೀಡಿದರು’ ಎಂದು ಲಕ್ಕಿ ಶಂಕರ್ ಹೇಳಿದರು.

ಉಗಾದಿ ಹಬ್ಬದ 15 ದಿನಗಳ ನಂತರ ಈ ಜಾತ್ರೆ ಆರಂಭ ಆಗುತ್ತೆ. ಡೈಲಾಗ್ ಬರೆದ ವಾಸು, ಶ್ರೀಧರ್ ಅವರೇ ನಿಜವಾದ ಡೈರೆಕ್ಟರ್. ಅವರ ಸಲಹೆ ತಗೊಂಡು ಇಡೀ ಜಾತ್ರೆಯನ್ನು ಲೈವ್ ಆಗಿ ಶೂಟ್ ಮಾಡಿದ್ದೇವೆ. ಈ ಪ್ರಯತ್ನ ಭಾರತದಲ್ಲೇ ಮೊದಲು. ಸಾವಿರಾರು ವರ್ಷಗಳ ಹಿಂದೆ ನಡೆದ ಇತಿಹಾಸವನ್ನು ತಿಳಿದುಕೊಂಡು ಸಿನಿಮಾ ಮಾಡಿದ್ದೇನೆ. ಸೆನ್ಸಾರ್ನಲ್ಲಿ ಸ್ವಲ್ಪ ತೊಂದರೆ ಆದರೂ, ಸರಿ ಮಾಡಿಕೊಂಡೆವು ’ ಎಂದು ಲಕ್ಕಿ ಶಂಕರ್ ಪ್ರೈಮ್ ಟಿವಿಗೆ ತಿಳಿಸಿದ್ದಾರೆ.

‘ಈ ಸಿನಿಮಾ ಆಗಲು ಮುಖ್ಯ ಕಾರಣ ಲಕ್ಕಿ ಶಂಕರ್. ನಾನು ಸಿನಿಮಾನೇ ಮಾಡಬಾರದು ಎಂದುಕೊಂಡಿದ್ದೆ, ಈಗ ಮಾಡಿದ್ದೇನೆ. ಈ ಸಿನಿಮಾದಲ್ಲಿ 30ರಿಂದ 40 ಜನ‌ ಕಲಾವಿದರು ನಟನೆ ಮಾಡಿದ್ದಾರೆ. ನಾನೂ ಒಂದು ಪಾತ್ರ ಮಾಡಿದ್ದೇನೆ. ಬಹಳ ಜನ ತಂತ್ರಜ್ಞರು ಕೈಜೋಡಿಸಿದ್ದಾರೆ’ ಎಂದು ಈ ಚಿತ್ರದ ನಿರ್ಮಾಪಕ ನರೇಶ್ ಗೌಡ ಹೇಳಿದ್ದಾರೆ.