Home Karavali Karnataka ಉಡುಪಿ : ಜಿಲ್ಲೆಯಲ್ಲಿ ಮಾದಕ ವಸ್ತು ಮಾರಾಟ ಹಾಗೂ ಬಳಕೆಗೆ ಕಡಿವಾಣ ಹಾಕುವಂತೆ ಕರ್ನಾಟಕ ರಕ್ಷಣಾ...

ಉಡುಪಿ : ಜಿಲ್ಲೆಯಲ್ಲಿ ಮಾದಕ ವಸ್ತು ಮಾರಾಟ ಹಾಗೂ ಬಳಕೆಗೆ ಕಡಿವಾಣ ಹಾಕುವಂತೆ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಮನವಿ…!!

ಉಡುಪಿ : ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ವತಿಯಿಂದ ಉಡುಪಿ ಜಿಲ್ಲೆಯಲ್ಲಿ ಮಾದಕ ವಸ್ತು ಮಾರಾಟ ಹಾಗೂ ಬಳಕೆಗೆ ಕಡಿವಾಣ ಹಾಕುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಮನವಿಯನ್ನು ನೀಡಲಾಯಿತು.

ಉಡುಪಿ ಜಿಲ್ಲಾದಂತ್ಯ ಮಾದಕ ವಸ್ತುಗಳ ಮಾರಾಟ ಹಾಗೂ ಬಳಕೆಯಿಂದಾಗಿ ಎಷ್ಟೋ ಯುವಕರು ದಾರಿ ತಪ್ಪಿ ಅವರ ಕುಟುಂಬಗಳು ಬೀದಿಗೆ ಬಂದಿದೆ. ಕೆಲವು ಜಾಗಗಳಲ್ಲಿ ಮಾದಕ ವಸ್ತುಗಳು ಅಂಗಡಿಗಳಲ್ಲಿ ಚಾಕಲೇಟ್ ದೊರೆಯುವಷ್ಟು ಸಲೀಸಾಗಿ ದೊರೆಯುತ್ತಿರುವುದು ದುರಾದೃಷ್ಟಕರ, ಇದಕ್ಕೆ ಬಲಿಯಾಗಿರುವ ಮಕ್ಕಳ ತಂದೆ-ತಾಯಿಯರ ರೋದನೆ ಕೆಳತೀರದ್ದು.

ಇತ್ತೀಚೆಗೆ ಹನಿಟ್ರ್ಯಾಪ್‌ನಂತಹ ಜಾಲಕ್ಕೆ ಸಿಲುಕಿ ಮರ್ಯಾದೆಗೆ ಅಂಜಿ ಆತ್ಮಹತ್ಯೆಗೈದಿರುವ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಅಭಿಷೇಕ್‌ ಆಚಾರ್ಯ ನ ವಿಚಾರದಲ್ಲಿ ಸಂಘಟನೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಗಮನ ಸೆಳೆಯ ಬಯಸುತ್ತದೆ. ಈ ವಿಚಾರದಲ್ಲಿ ಪೊಲೀಸ್ ಇಲಾಖೆಯು ನಿಷ್ಪಕ್ಷಪಾತವಾದ ತನಿಖೆಯನ್ನು ನಡೆಸಿ, ಇದರ ಹಿಂದಿರುವ ಜಾಲವನ್ನು ಬಯಲಿಗೆಳೆದು ಸತ್ಯಾ ಸತ್ಯತೆಯನ್ನು ಜನತೆಯ ಮುಂದಿಡಬೇಕು ಎಂದು ಸಂಘಟನೆಯ ಪರವಾಗಿ ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಸುಧಾಕರ್ ನಾಯ್ಕ್ ರವರಿಗೆ ಮನವಿಯನ್ನು ನೀಡಲಾಯಿತು.

ಉಡುಪಿ ಜಿಲ್ಲೆಯನ್ನು ಕಾಡುತ್ತಿರುವ ಮಾದಕ ದ್ರವ್ಯಗಳ ಜಾಲವನ್ನು ಬುಡ ಸಮೇತ ಕಿತ್ತುಹಾಕಿ ಸ್ವಸ್ಥ ಸಮಾಜ ಹಾಗೂ ಅಪರಾಧ ರಹಿತ ಸಮಾಜವನ್ನು ನಿರ್ಮಿಸಬೇಕಾಗಿ ಕಾರ್ಕಳ ತಾಲೂಕು ಅಧ್ಯಕ್ಷರಾದ ಹನೀಫ್ ಈ ಸಂದರ್ಭ ಮನವಿಯನ್ನು ಮಾಡಿದರು.

ಈ ಸಂದರ್ಭದಲ್ಲಿ ಕರವೇ ಗೌರವಾಧ್ಯಕ್ಷರಾದ ಅನ್ಸಾರ್ ಅಹಮದ್, ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿ,ಮಹಿಳಾ ಜಿಲ್ಲಾಧ್ಯಕ್ಷರಾದ ಜ್ಯೋತಿ ಸೇರಿಗಾರ್ತಿ, ಉಪಾಧ್ಯಕ್ಷರಾದ ಸೈಯದ್ ನಿಜಾಮುದ್ದೀನ್, ಮಹಿಳಾ ಉಪಾಧ್ಯಕ್ಷರಾದ ದೇವಕಿ ಬಾರ್ಕೂರು ಕಿರಣ್ ಪ್ರತಾಪ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನುಷಾ ಆಚಾರ್ ಪಳ್ಳಿ, ಗೌರವ ಸಲಹೆಗಾರರಾದ ಜಯ ಪ್ರಕಾಶ್ ಶೆಟ್ಟಿ, ಸಂಘಟನಾ ಕಾರ್ಯದರ್ಶಿ ನಾಗರಾಜ್, ಜಿಲ್ಲಾ ಸದಸ್ಯರಾದ ಮಂಜುನಾಥ್, ಚಂದ್ರಕಲಾ,ಕಾರ್ಕಳ ತಾಲೂಕು ಅಧ್ಯಕ್ಷರಾದ ಹನೀಫ್ ಮದರ್ ಇಂಡಿಯಾ, ಗೌರವಾಧ್ಯಕ್ಷರಾದ ಷಾ ನವಾಜ್ ಬಂಗ್ಲಗುಡ್ಡೆ, ಉಪಾಧ್ಯಕ್ಷರಾದ ರಿಝ್ವಾನ್, ಸೈಯ್ಯದ್ ಇಕ್ಬಾಲ್, ಇಮ್ತಿಯಾಝ್, ಪ್ರಧಾನ ಕಾರ್ಯದರ್ಶಿ ಸುರೇಶ್ ಆಚಾರ್ಯ, ಸಂಘಟನಾ ಅಧ್ಯಕ್ಷರಾದ ಮನಾವರ್ ಕೈಕಂಬ, ಸಂಘಟನಾ ಕಾರ್ಯದರ್ಶಿ ಅಬೂಬಕ್ಕರ್ ಮೊದಲಾದವರು ಉಪಸ್ಥಿತರಿದ್ದರು.
ವರದಿ : ಅನುಷಾ ಆಚಾರ್ ಪಳ್ಳಿ
ಜಿಲ್ಲಾ ಪ್ರಧಾನ ಕಾರ್ಯದರ್ಶಿ
ಮಹಿಳಾ ಘಟಕ
ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ