Home Latest ಸಹಾಯಧನಕ್ಕೆ ಅರ್ಜಿ…!

ಸಹಾಯಧನಕ್ಕೆ ಅರ್ಜಿ…!

ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕ್ರಿಶ್ಚಿಯನ್ ಅಭಿವೃದ್ಧಿ ಕಾರ್ಯಕ್ರಮದಡಿ ಕ್ರಿಶ್ಚಿಯನ್ ಸ್ವಯಂ ಸೇವಾ ಸಂಸ್ಥೆಗಳು ನಡೆಸುವ ಅನಾಥಾಶ್ರಮ ಹಾಗೂ ವೃದ್ಧಾಶ್ರಮ ಎಚ್‌ಐವಿ ಸೋಂಕಿತ ಮಕ್ಕಳ ಆಶ್ರಯಧಾಮಗಳಿಗೆ ಸಹಾಯಧನ ಸೌಲಭ್ಯಕ್ಕಾಗಿ ಪ್ರಸ್ತಾವನೆಯನ್ನು ಸೂಕ್ತ ದಾಖಲೆಗಳೊಂದಿಗೆ ದ್ವಿಪ್ರತಿಯಲ್ಲಿ ಆ.31 ರ ಒಳಗೆ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ನೆಲ ಮಹಡಿ, ಮೌಲಾನಾ ಅಜಾದ್ ಭವನ, ಪಶು ಚಿಕಿತ್ಸಾಲಯದ ಹತ್ತಿರ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ ಅಥವಾ ಕಾರ್ಕಳ, ಕುಂದಾಪುರ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.