Home Crime ತಲೆಮರೆಸಿದ್ದ ಆರೋಪಿ ಸೆರೆ…!!

ತಲೆಮರೆಸಿದ್ದ ಆರೋಪಿ ಸೆರೆ…!!

ಉಡುಪಿ: ನ್ಯಾಯಾಲಯಕ್ಕೆ ಹಾಜರಾಗದೆ 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಮಧು ಎಂಬಾತನನ್ನು ಗುರುವಾರ ಬಂಧಿಸಿ ಉಡುಪಿ ಸಿಜೆಎಂ ನ್ಯಾಯಾಲಯಕ್ಕೆ ಮಲ್ಪೆ ಪೊಲೀಸರು ಹಾಜರು ಪಡಿಸಿದ್ದಾರೆ.

ನ್ಯಾಯಾಲಯವು ಜೂ.29ರ ತನಕ ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿಯನ್ನು ಹಿರಿಯಡ್ಕದಲ್ಲಿರುವ ಕಾರಾಗೃಹಕ್ಕೆ ಕಳುಹಿಸಲಾಗಿದೆ.

ಮಧು ವಿರುದ್ಧ ಮಲ್ಪೆ ಹಾಗೂ ಕಾಪು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದೇವಳ ಕಳವು ತಲಾ ಒಂದು ಪ್ರಕರಣ, ಬೆಂಗಳೂರು ನಗರದಲ್ಲಿ ಎರಡು ಪ್ರಕರಣ ದಾಖಲಾಗಿದೆ.