Home Kundapura News ಮಲಗಿದ್ದಲ್ಲೇ ಗಾಯಾಳು ವ್ಯಕ್ತಿ ಸಾವು

ಮಲಗಿದ್ದಲ್ಲೇ ಗಾಯಾಳು ವ್ಯಕ್ತಿ ಸಾವು

ಕುಂದಾಪುರ: ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆಯ ಬಳಿಕ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಹಟ್ಟಿಯಂಗಡಿ ಗ್ರಾಮದ ಕರ್ಕಿಗುಡ್ಡೆ ನಿವಾಸಿ ದಿನೇಶ್ (38) ಮಲಗಿದ್ದಲ್ಲೇ ಮೃತಪಟ್ಟಿದ್ದಾರೆ.

 

ಕೂಲಿ ಕೆಲಸ ಮಾಡಿಕೊಂಡಿದ್ದ ಅವರು 2026ರ, ಜ.4ರಂದು ಬೈಕ್‌ನಲ್ಲಿ ಹೋಗುತ್ತಿರುವಾಗ ಕೋಟೇಶ್ವರದಲ್ಲಿ ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದರು.

 

ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೋಮಾ ಸ್ಥಿತಿಯಲ್ಲಿದ್ದ ಅವರಿಗೆ ಶಸ್ತ್ರಚಿಕಿತ್ಸೆ ನಡೆದಿದ್ದು, ಜೂ. 16ರಂದು ಆಸ್ಪತ್ರೆಯಿಂದ ಡಿಸ್ಟಾರ್ಜ್‌ ಆಗಿದ್ದರು. ಈ bahgeಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ