ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಪಾಣೆಮಂಗಳೂರು ಫೈ ಓವರ್ ನಲ್ಲಿ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಪುತ್ತೂರಿನ ಯುವಕ ಮೃತಪಟ್ಟ ಘಟನೆ ಸಂಭವಿಸಿದೆ.
ಬಂಟ್ವಾಳ ಪಾಣೆಮಂಗಳೂರು ಫೈ ಓವರ್ ಬಳಿ, ಮೂವರು ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ ಪರಿಣಾಮ ಗಂಭೀರ ಗಾಯಗೊಂಡಿದ್ದ ಪುತ್ತೂರು ಕುದ್ಮಾರು ನಿವಾಸಿ ಕಾರ್ತಿಕ್ (24) ರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿತ್ತು.
ಆದರೆ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಪ್ರಕರಣ ದಾಖಲಾಗಿದೆ.



