Home Latest ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ನೇತೃತ್ವದಲ್ಲಿ ರಾಹುಲ್ ಗಾಂಧಿ ಜನ್ಮದಿನಾಚರಣೆ, ಅಶಕ್ತರಿಗೆ ಸವಲತ್ತುಗಳ...

ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ನೇತೃತ್ವದಲ್ಲಿ ರಾಹುಲ್ ಗಾಂಧಿ ಜನ್ಮದಿನಾಚರಣೆ, ಅಶಕ್ತರಿಗೆ ಸವಲತ್ತುಗಳ ವಿತರಣೆ

ಉಡುಪಿ: ರಾಹುಲ್ ಗಾಂಧಿಯವರು ದೇಶದ ಭವಿಷ್ಯದ ನಾಯಕರಾಗಿದ್ದು ಎಷ್ಟೇ ಟೀಕೆಗಳನ್ನು ಅನುಭವಿಸಿದರೂ ಕೂಡ ಎದೆಗುಂದದೆ ಸಾಮಾಜಿಕ ನ್ಯಾಯದ ಪರ ದನಿ ಎತ್ತುವ ಕೆಲಸ ಮಾಡುತ್ತಿದ್ದಾರೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಹೇಳಿದರು.

ಅವರು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿಯವರ ಜನ್ಮದಿನದ ಅಂಗವಾಗಿ ಉಡುಪಿಯ ಕಾಂಗ್ರೆಸ್ ಭವನದಲ್ಲಿ ನಡೆದ ವಿಶೇಷ ಚೇತನರಿಗೆ ಸಹಾಯಕ ಸಾಧನಗಳು ಹಾಗೂ ಪೌಷ್ಟಿಕ ಆಹಾರ ಕಿಟ್ ಗಳ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು

ನಿರಂತರ ಜನರೆ ನೋವಿಗೆ ಸ್ಪಂದಿಸುವ, ಸಾಮಾಜಿಕ ನ್ಯಾಯದ ಪರ ಹೋರಾಡುವ, ಮಾನವೀಯ ಹೃದಯದ ನಾಯಕ ರಾಹುಲ್ ಗಾಂಧಿಯವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಹಮ್ಮಿಕೊಂಡ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಮಾತನಾಡಿ ದೇಶದ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷದ ಕೊಡುಗೆ ಅಪಾರವಾಗಿದ್ದು, ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಬಡವರ ಉದ್ಧಾರಕ್ಕಾಗಿ ಕೈಗೊಂಡ ಯೋಜನೆಗಳ ಪರಿಣಾಮವಾಗಿ ಭಾರತ ಇಂದು ಅಭಿವೃದ್ಧಿಯ ಹಾದಿಯಲ್ಲಿ ಮುನ್ನಡೆದಿದೆ ಎಂದು ಹೇಳಿದರು

ವಿರೋಧ ಪಕ್ಷಗಳು ಬಡವರ ಉದ್ಧಾರ ಮಾಡುವ ಬದಲು ಶ್ರೀಮಂತರ ಏಳಿಗೆಗೆ ಶ್ರಮಿಸುತ್ತಿದೆ ಎಂದು ಆರೋಪಿಸಿದ ಅವರು, ಕಾಂಗ್ರೆಸ್ ಪಕ್ಷವೇ ಬಡವರ ಪರವಾಗಿ ಕೆಲಸ ಮಾಡುತ್ತಿರುವ ರಾಜಕೀಯ ಶಕ್ತಿಯಾಗಿದೆ ಎಂದು ಅಭಿಪ್ರಾಯಪಟ್ಟರು.

ಕಾಂಗ್ರೆಸ್ ಪಕ್ಷವನ್ನು ದೂರವಿಟ್ಟರೆ ಬಡವರು ಇನ್ನಷ್ಟು ಸಂಕಷ್ಟಕ್ಕೆ ಒಳಗಾಗುವ ಸಾಧ್ಯತೆ ಇದೆ. ಆದ್ದರಿಂದ ಬಡವರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ, ಸಮಾಜದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದರು

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ವಹಿಸಿದ್ದರು

ಕಾರ್ಯಕ್ರಮದಲ್ಲಿ ಸುಮಾರು 75 ಮಂದಿ ವಿಶೇಷ ಚೇತನರಿಗೆ ಸಹಾಯಕ ಸಾಧನಗಳಾದ ಶ್ರವಣ ಸಾಧನ, ಕಂಬೋಡ್ ವೀಲ್ ಚೇರ್, ವಾಟರ್ ಬೆಡ್, ವಾಕರ್, ವಾಕಿಂಗ್ ಸ್ಟಿಕ್, ಕಚ್ ಹಾಗೂ ಪೌಷ್ಟಿಕ ಆಹಾರ ಕಿಟ್ ಗಳನ್ನ ಹಸ್ತಾಂತರಿಸಲಾಯಿತು.

ಕಾರ್ಯಕ್ರಮದಲ್ಲಿ ಹರಿ ಪ್ರಸಾದ್ ರೈ, ಎಂ. ಏ ಗಫೂರ್, ಕೇಶವ ಕೋಟ್ಯಾನ್, ಪ್ರಖ್ಯಾತ್ ಶೆಟ್ಟಿ, ನರಸಿಂಹಮೂರ್ತಿ , ಸದಾನಂದ ಕಾಂಚನ್, ಹಬೀಬ್ ಅಲಿ, ಕುಶಾಲ್ ಶೆಟ್ಟಿ, ಮಹಾಬಲ ಕುಂದರ್, ಪ್ರಶಾಂತ್ ಜತ್ತನ್ನ, ಗಣೇಶ್ ನೆರ್ಗಿ, ಸಜ್ಜನ್ ಶೆಟ್ಟಿ, ಜ್ಯೋತಿ ಹೆಬ್ಬಾರ್, ಹಮ್ಮದ್, ಸೂರಜ್ ಕಲ್ಮಾಡಿ, ಸೌರಭ್ ಬಲ್ಲಾಳ್, ಸುರೇಶ್ ಶೆಟ್ಟಿ ಬನ್ನಂಜೆ, ರಾಘವೇಂದ್ರ ಎನ್, ಮಮತಾ ಶೆಟ್ಟಿ, ಹರೀಶ್ ಕಿಣಿ,ಕೀರ್ತಿ ಶೆಟ್ಟಿ, ಕಿಶನ್ ಹೆಗ್ಡೆ ಹಾಗೂ ಇತರರು ಉಪಸ್ಥಿತರಿದ್ದರು