ಕೋಟ, ಜೂನ್ 20: ಬ್ರಹ್ಮಾವರ ತಾಲೂಕಿನ ನಂಚಾರು ಗ್ರಾಮದ ತಾರೇಕಟ್ಟೆ ಸಮೀಪದ ತೋಟದ ಕೆರೆಯಲ್ಲಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ವರದಿಯಾಗಿದೆ.
ಮೃತರನ್ನು ನಂಚಾರು ಗ್ರಾಮದ ನಿವಾಸಿ ಮಹೇಶ್ ನಾಯರಿ (53) ಎಂದು ಗುರುತಿಸಲಾಗಿದೆ. ಇವರು ಕುಟುಂಬ ಸಮೇತ ಬೆಂಗಳೂರಿನಲ್ಲಿ ವಾಸವಾಗಿದ್ದು, ಜೂನ್ 18ರಂದು ಸ್ವಗ್ರಾಮಕ್ಕೆ ಬಂದಿದ್ದರು.
ಅಂದು ಸಂಜೆ ತೋಟಕ್ಕೆ ತೆರಳಿದ್ದ ಮಹೇಶ್ ನಾಯರಿ ರಾತ್ರಿ ವೇಳೆಯಾದರೂ ಮನೆಗೆ ಮರಳದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹುಡುಕಾಟ ನಡೆಸಿದ್ದರು. ಈ ವೇಳೆ ತೋಟದಲ್ಲಿರುವ ಕೆರೆಯ ಸಮೀಪ ಚಪ್ಪಲಿ ಪತ್ತೆಯಾಗಿದ್ದು, ಬಳಿಕ ಕೆರೆಯಲ್ಲಿ ಹುಡುಕಾಡಿದಾಗ ಮಹೇಶ್ ನಾಯರಿ ಅವರ ಮೃತದೇಹ ಕಂಡುಬಂದಿದೆ.
ಪ್ರಾಥಮಿಕ ತನಿಖೆಯ ಪ್ರಕಾರ, ತೋಟದ ಕೆರೆಯ ಪಕ್ಕದ ಕಾಲುದಾರಿಯಲ್ಲಿ ನಡೆದುಕೊಂಡು ಬರುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಈ ಸಂಬಂಧ ಕೋಟ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಸಂಖ್ಯೆ 25/2026ರಡಿ ಕಲಂ 194 BNSS ಅನ್ವಯ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.




