Home Crime ಅಕ್ರಮವಾಗಿ ನಾಡ ಬಂದೂಕುಗಳನ್ನು ತಯಾರಿಸುತ್ತಿದ್ದ ಘಟಕದ ಮೇಲೆ ಪೊಲೀಸ್ ದಾಳಿ : ಓರ್ವನ ಬಂಧನ…!!

ಅಕ್ರಮವಾಗಿ ನಾಡ ಬಂದೂಕುಗಳನ್ನು ತಯಾರಿಸುತ್ತಿದ್ದ ಘಟಕದ ಮೇಲೆ ಪೊಲೀಸ್ ದಾಳಿ : ಓರ್ವನ ಬಂಧನ…!!

ಶಿವಮೊಗ್ಗ: ಅಕ್ರಮವಾಗಿ ನಾಡ ಬಂದೂಕುಗಳನ್ನು ತಯಾರಿಸುತ್ತಿದ್ದ ಘಟಕದ ಮೇಲೆ ದಾಳಿ ನಡೆಸಿದ ಪೊಲೀಸರು ಸೊತ್ತುಗಳ ಸಹಿತ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ಶಿಕಾರಿಪುರ ಪಟ್ಟಣ್ಣದ ಭದ್ರಾಪುರ ಗ್ರಾಮದ 3ನೇ ಕ್ರಾಸ್ ನಿವಾಸಿ ಲಕ್ಷ್ಮಣಪ್ಪ ಎಂದು ತಿಳಿದು ಬಂದಿದೆ.

ಮೂಲತಃ ವೃತ್ತಿಯಲ್ಲಿ ಕಾರ್ಪೆಂಟರ್ ಆಗಿರುವ ಈತ ತನ್ನ ಮನೆ ಪಕ್ಕದಲ್ಲಿರುವ ಹಳೆಯ ಮನೆಯಲ್ಲಿ ಅಕ್ರಮವಾಗಿ ನಾಡ ಬಂದೂಕುಗಳನ್ನು ತಯಾರು ಮಾಡಿಕೊಡುತ್ತಿದ್ದ ಕುರಿತು ಫೆ.4 ರಂದು ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು ಎಂದು ತಿಳಿದು ಬಂದಿದೆ.

ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು, ಅಕ್ರಮವಾಗಿ ತಯಾರು ಮಾಡುತ್ತಿದ್ದ ಬಂದೂಕುಗಳು ಮತ್ತು ಇತರೆ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

ಆರೋಪಿಯನ್ನು ನ್ಯಾಯಾಲಯದ ಆದೇಶದಂತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಿಳಿದು ಬಂದಿದೆ.