Home Crime ಇನ್ಸ್ಟಾಗ್ರಾಮ್ ನಲ್ಲಿ ಕೋಮು ಪ್ರಚೋದನಾತ್ಮಕ ಪೋಸ್ಟ್ ಪ್ರಸಾರ : ಪ್ರಕರಣ ದಾಖಲು…!!

ಇನ್ಸ್ಟಾಗ್ರಾಮ್ ನಲ್ಲಿ ಕೋಮು ಪ್ರಚೋದನಾತ್ಮಕ ಪೋಸ್ಟ್ ಪ್ರಸಾರ : ಪ್ರಕರಣ ದಾಖಲು…!!

ಬಂಟ್ವಾಳ: ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಂ ನಲ್ಲಿ ಕೋಮು ಪ್ರಚೋದನಾತ್ಮಕ ಪೋಸ್ಟ್ ಪ್ರಸಾರ ಪಡಿಸಿದ ಹಿನ್ನೆಲೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ಸ್ಟಾಗ್ರಾಮ್ ನಲ್ಲಿ on_fixed_leader ಎಂಬ ಹೆಸರಿನ ಖಾತೆಯಲ್ಲಿ ಧಾರ್ಮಿಕ ಭಾವನೆಗೆ ದಕ್ಕೆಯಾಗುವಂತಹ ಹಾಗೂ ಕೋಮು ಭಾವನೆಗಳನ್ನು ಕೆರಳಿಸಿ, ಸಮಾಜದಲ್ಲಿ ಅಶಾಂತಿ ಉಂಟು ಮಾಡುವಂತಹ ಪೋಸ್ಟ್ ಗಳನ್ನು ಪ್ರಸಾರ ಮಾಡಿದ್ದಾರೆ ‌

ಈ ಕುರಿತಾಗಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.