ಮಣಿಪಾಲ: ಉಡುಪಿ ಜಿಲ್ಲೆಯ ಮಣಿಪಾಲ ಸಮೀಪ ಕಾಲೇಜು ವಿದ್ಯಾರ್ಥಿಯೋರ್ವ ಮನೆಯಲ್ಲಿ ಸಿರೇಯಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.
ಆತ್ಮಹತ್ಯೆಗೆ ಶರಣಾದ ಯುವಕ ಮಂಜುನಾಥ ಮೇಟಿ ಎಂದು ತಿಳಿದು ಬಂದಿದೆ.
ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪ್ರಕರಣದ ವಿವರ : ಪಿರ್ಯಾದಿದಾರರಾದ ಗುರುಪ್ಪ ಮೇಟಿ (43), ಅಲೆವೂರು ಗ್ರಾಮ ಉಡುಪಿ ಇವರ ಮಗ ಮಂಜುನಾಥ ಮೇಟಿ (17) ಎಂಬಾತನು ಪಿರ್ಯಾದಿದಾರರೊಂದಿಗೆ ವಾಸ ಮಾಡಿಕೊಂಡಿದ್ದು ಹಿರಿಯಡ್ಕ GPUC ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾಬ್ಯಾಸ ಮಾಡಿಕೊಂಡಿದ್ದವನು. ದಿನಾಂಕ 30/10/2025 ರಂದು ಮದ್ಯಾಹ್ನ ಕಾಲೇಜಿನಿಂದ ಮನೆಗೆ ಬಂದು ಮನೆಯ ಅಡುಗೆ ಕೋಣೆಯಲ್ಲಿರುವ ಸ್ಲಾಬಿನ ಹುಕ್ಕಿಗೆ ಸಿರೇಯಿಂದ ಕುತ್ತಿಗೆಗೆ ನೇಣು ಬಿಗಿದು ಮೃತಪಟ್ಟಿದ್ದು ಆತನು ಅತೀಯಾಗಿ ಮೊಬೈಲ್ ಬಳಕೆ ಮಾಡುತ್ತಿದ್ದು ಯಾವಾಗಲೂ ಒಬ್ಬಂಟಿಯಾಗಿ ಇರುತ್ತಿದ್ದು ಯಾವುದೋ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆ ಯುಡಿಆರ್ ಕ್ರಮಾಂಕ 41/2025 ಕಲಂ:194 BNSS ರಂತೆ ಪ್ರಕರಣ ದಾಖಲಾಗಿರುತ್ತದೆ



