Home Latest ಉಪ್ಪೂರಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಹಾಗೂ ಸಭಾಭವನದ ಶಿಲಾನ್ಯಾಸ…!!

ಉಪ್ಪೂರಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಹಾಗೂ ಸಭಾಭವನದ ಶಿಲಾನ್ಯಾಸ…!!

ಉಪ್ಪೂರು: ಬಿಲ್ಲವ ಸೇವಾ ಸಂಘ (ರಿ.) ಇವರ ಆಶ್ರಯದಲ್ಲಿ ನಿರ್ಮಾಣಗೊಳ್ಳಲಿರುವ ಉಪ್ಪೂರು ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಹಾಗೂ ಸಭಾಭವನ ದ ಶಿಲಾನ್ಯಾಸ ಸಭಾ ಕಾರ್ಯಕ್ರಮವು ಇಂದು (ಜೂನ್ 21) ಪಿಳ್ಕಳ ಗರೋಡಿ ವಠಾರದಲ್ಲಿ  ಜರುಗಿತು.

ಕಾರ್ಯಕ್ರಮದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ನಿಕಟ ಪೂರ್ವ ಶಾಸಕರಾದ ಕೆ . ರಘುಪತಿ ಭಟ್ಭಾ ಗವಹಿಸಿ ಶಿಲಾನ್ಯಾಸ ನೆರವೇರಿಸಿದ ಬಳಿಕ ಸಭೆಯನ್ನುದ್ದೇಶಿಸಿ ಮಾತನಾಡಿ, ಮಂದಿರ ಮತ್ತು ಸಭಾಭವನ ನಿರ್ಮಾಣ ಕಾರ್ಯವು ಸಮಾಜದ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಚಟುವಟಿಕೆಗಳಿಗೆ ಹೊಸ ಚೈತನ್ಯ ನೀಡಲಿ ಎಂದು ಶುಭ ಹಾರೈಸಿದರು. ಅವರು ಸಂಘದ ಕಾರ್ಯಚಟುವಟಿಕೆಗಳನ್ನು ಶ್ಲಾಘಿಸಿ, ಸಮಾಜದ ಏಕತೆ ಮತ್ತು ಅಭಿವೃದ್ಧಿಗೆ ಇಂತಹ ಯೋಜನೆಗಳು ಸಹಕಾರಿಯಾಗಲಿ ಎಂದು ಆಶಿಸಿದರು.

 

ಈ ಸಂದರ್ಭದಲ್ಲಿ ಬಿಲ್ಲವ ಸೇವಾ ಸಂಘದ ಪದಾಧಿಕಾರಿಗಳು, ಸಮಾಜದ ಮುಖಂಡರು, ಗಣ್ಯರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು. ಶಿಲಾನ್ಯಾಸ ಕಾರ್ಯಕ್ರಮವು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು.