Home Karavali Karnataka ಮಂಗಳೂರು ಪೊಲೀಸರ ಕಾರ್ಯಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘನೆ….!!

ಮಂಗಳೂರು ಪೊಲೀಸರ ಕಾರ್ಯಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘನೆ….!!

ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು….

ಉಡುಪಿ: ಮಂಗಳೂರಿನ ಬಿಜೈಯ ಹಿರಿಯ ನಾಗರಿಕ ಮಹಿಳೆಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಮಾಡಿ, ಸುಮಾರು 17 ಲಕ್ಷ ರೂಪಾಯಿ ವರ್ಗಾಯಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಹಣ ವಂಚಕರ ಪಾಲಾಗದಂತೆ ತಡೆದ ಪೊಲೀಸರ ಕಾರ್ಯವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘಿಸಿದ್ದಾರೆ.

ಡಿಸಿಪಿಗಳಾದ ಮಿಥುನ್‌ ಹಾಗೂ ರವಿಶಂಕರ್ ಅವರು ಈಗಾಗಲೆ ಸಂತ್ರಸ್ತೆಗೆ, ಅವರು ಕಳೆದುಕೊಂಡ 17 ಲಕ್ಷ ರೂಪಾಯಿಗಳ ವರ್ಗಾವಣೆಯ ಆದೇಶ ಪತ್ರವನ್ನು ಹಸ್ತಾಂತರಿಸಲಾಗಿದ್ದು, ಪೊಲೀಸ್ ಇಲಾಖೆಯ ಕಾರ್ಯ ನಿಜಕ್ಕೂ ಶ್ಲಾಘನೀಯ, ಇಂಥ ಕಾರ್ಯಚರಣೆ ಗಳಿಂದ ಸಾರ್ವಜನಿಕರಿಗೆ ಅದರಲ್ಲೂ ಹಿರಿಯ ನಾಗರಿಕರಿಗೆ ಪೊಲೀಸ್ ಇಲಾಖೆ ಮೇಲೆ ಮತ್ತಷ್ಟು ವಿಶ್ವಾಸ ಹೆಚ್ಚುತ್ತದೆ. ಸೈಬರ್ ವಂಚನೆ, ಡಿಜಿಟಲ್ ಅರೆಸ್ಟ್ ವಂಚನೆಗಳಿಂದ ನಾಗರಿಕರು ದೂರ ಉಳಿಯಬೇಕು, ಪೊಲೀಸರಿಗೆ ಸಹಕರಿಸಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಮನವಿ ಮಾಡಿದ್ದಾರೆ.