ಮಂಗಳೂರು: ಮಾದಕ ವಸ್ತು ಎಂಡಿಎಂಎ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯೋರ್ವನನ್ನು ಬಂಧಿಸಿ 1.5 ಲಕ್ಷ ರೂ. ಮೌಲ್ಯದ 15 ಗ್ರಾಂ ಮಾದಕ ವಸ್ತುವನ್ನು ಮುಲ್ಕಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಧಿತನನ್ನು ಹಳೆಯಂಗಡಿ ಸಾಗು ನಿವಾಸಿ ಮುಸಾಹಿದ್ (34) ಎಂದು ತಿಳಿದು ಬಂದಿದೆ.
ಬಂಧಿತನ ಬಳಿ ಇದ್ದ 1.5 ಲಕ್ಷ ರೂ. ಮೌಲ್ಯದ ಎಂಡಿಎಂಎಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಆರೋಪಿಯು ಫೆ.4ರಂದು ಮುಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ವಸ್ತು ಸಹಿತ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಈ ಕುರಿತು ಆರೋಪಿಯ ವಿರುದ್ಧ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



