ಮಂಗಳೂರು: ನಗರದ ಎಕ್ಕೂರು ರೈಲ್ವೇ ಸೇತುವೆ ಮೇಲ್ಭಾಗದಲ್ಲಿ ಟ್ರಕ್ ಹಿಂಭಾಗಕ್ಕೆ ಬೈಕ್ ಡಿಕ್ಕಿಯಾಗಿ ಈ ಭೀಕರ ಅಪಘಾತದಲ್ಲಿ ಬೈಕ್ ಸವಾರ ಪ್ರಾಣ ಕಳೆದುಕೊಂಡಿರುವ ಘಟನೆ ವರದಿಯಾಗಿದೆ.
ವರ್ಕಾಡಿಯ ಬಾಕ್ರಬೈಲಿನ ಪಾತೂರು ನಿವಾಸಿ ಸುಧೀಶ್ ಸಿ.ಕೆ (26) ಮೃತಪಟ್ಟ ಸವಾರ ಎಂಬ ಮಾಹಿತಿ ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.




