Home Latest ಜ್ಞಾನಗಂಗಾ ಪದವಿ ಪೂರ್ವ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ…!!

ಜ್ಞಾನಗಂಗಾ ಪದವಿ ಪೂರ್ವ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ…!!

ಮೂಡುಬೆಳ್ಳೆ : ಜ್ಞಾನಗಂಗಾ ಪದವಿ ಪೂರ್ವ ಕಾಲೇಜು ನೆಲ್ಲಿಕಟ್ಟೆ ಮೂಡುಬೆಳ್ಳೆ.( ಜೆ.ಐ.ಇ.ಸಿ.ಕೋ ಆಪರೇಟಿಂಗ್ ಸೊಸೈಟಿ ಉಡುಪಿ ಇದರ ಅಂಗಸಂಸ್ಥೆ) ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಜೂನ್ 20 ರಂದು ನಡೆಯಿತು.

ಜ್ಞಾನಗಂಗಾ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷರಾದ ಯಾದವ ದೇವಾಡಿಗ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಇವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಯೋಗದ ಅಗತ್ಯ ಮತ್ತು ಅವಶ್ಯಕತೆಯನ್ನು ತಿಳಿಸಿದರು.
ಯೋಗಪಾಸನ ಉಚಿತ ಯೋಗ ತರಬೇತಿ ಕೇಂದ್ರ ಕೆಂಚನಕೆರೆ ಮುಲ್ಕಿಯ ಯೋಗ ಗುರು ಜಯ ಮುದ್ದು ಶೆಟ್ಟಿ, ಇವರ ಜೀವನವನ್ನು, ಜೀವನ ಶೈಲಿಯನ್ನು ವಿದ್ಯಾರ್ಥಿಗಳಿಗೆ ತಿಳಿಸಿ ಹೇಳಿದರು.

ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದ ಯೋಗ ಗುರುಗಳಾದ ಜಯ ಮುದ್ದು ಶೆಟ್ಟಿ ಇವರು ನಮ್ಮ ದಿನನಿತ್ಯ ಜೀವನದಲ್ಲಿ ಉಪಯೋಗ ವಾಗುವಂತಹ ಯೋಗ ಧ್ಯಾನ ವ್ಯಾಯಾಮಗಳನ್ನು ಪ್ರಾತ್ಯಕ್ಷಿಕೆಯಾಗಿ ವಿದ್ಯಾರ್ಥಿಗಳಿಗೆ ಹೇಳಿಕೊಟ್ಟು ಅದರ ಉಪಯೋಗವನ್ನು ವಿವರವಾಗಿ ತಿಳಿಹೇಳಿದರು.

ಜ್ಞಾನಗಂಗಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆಯಾದ ಡಾ. ಲೀನಾ ಎಸ್ ನಾಯಕ್ ಇವರು ವೇದಿಕೆಯಲ್ಲಿರುವ ಅತಿಥಿ ಗಣ್ಯರೆಲ್ಲರಿಗೂ ಹೂಗುಚ್ಚವನ್ನು ನೀಡಿ ಸ್ವಾಗತಿಸಿ, ಆಗಮಿಸಿದ ಸರ್ವರನ್ನು ಸ್ವಾಗತಿಸಿದರು.

ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕುಮಾರಿ ತ್ರಿಷಾ ಕಾರ್ಯಕ್ರಮ ನಿರೂಪಿಸಿದರು. ಜ್ಞಾನಗಂಗಾ ಪದವಿ ಪೂರ್ವ ಕಾಲೇಜಿನ ಪ್ರಭಾರ ಕಾರ್ಯದರ್ಶಿ ಪ್ರಭಾಕರ್ ಕೆ. ಎಸ್ ಧನ್ಯವಾದ ಸಮರ್ಪಿಸಿದರು.

ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯರು ಕಾರ್ಯಕ್ರಮದ ಮೊದಲಿಗೆ ಯೋಗದ ಹಾಡಿನೊಂದಿಗೆ ಪ್ರಾರ್ಥನೆ ಸಲ್ಲಿಸಿದರು.