Home Latest ಸರ್ಕಾರಿ ಆಸ್ಪತ್ರೆಗಳಲ್ಲಿ ಅಧಿಕೃತ ಫೋನ್ ನಂಬರ್ ಕಡ್ಡಾಯ ಬಳಕೆಗೆ ಆಗ್ರಹ…!!

ಸರ್ಕಾರಿ ಆಸ್ಪತ್ರೆಗಳಲ್ಲಿ ಅಧಿಕೃತ ಫೋನ್ ನಂಬರ್ ಕಡ್ಡಾಯ ಬಳಕೆಗೆ ಆಗ್ರಹ…!!

ಬೈಂದೂರು: ಕುಂದಾಪುರ, ಬೈಂದೂರು ಹಾಗೂ ಉಡುಪಿ ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಅಧಿಕೃತ ದೂರವಾಣಿ ಸಂಖ್ಯೆಯನ್ನು ಕಡ್ಡಾಯವಾಗಿ ಬಳಸುವಂತೆ ಅಂಬೇಡ್ಕರ್ ಸೇನೆ ಉಡುಪಿ ಜಿಲ್ಲಾಧ್ಯಕ್ಷ ಸತೀಶ್ ಕಂಚುಗೋಡು ಮನವಿ.

ಸಾರ್ವಜನಿಕರು ತುರ್ತು ಆರೋಗ್ಯ ಸೇವೆಗಾಗಿ ಆಸ್ಪತ್ರೆಗೆ ಕರೆ ಮಾಡಿದಾಗ ಹಲವು ಕಡೆಗಳಲ್ಲಿ ಫೋನ್ ಸಂಪರ್ಕ ಲಭ್ಯವಾಗುತ್ತಿಲ್ಲ ಎಂಬ ಆರೋಪ.

ತುರ್ತು ಸಂದರ್ಭಗಳಲ್ಲಿ ಆಸ್ಪತ್ರೆಗಳ ಅಧಿಕೃತ ದೂರವಾಣಿ ಸಂಖ್ಯೆ ಕಾರ್ಯನಿರ್ವಹಿಸದಿದ್ದರೆ ಬಡ ಹಾಗೂ ಗ್ರಾಮೀಣ ಭಾಗದ ರೋಗಿಗಳಿಗೆ ತೊಂದರೆ ಉಂಟಾಗುತ್ತಿದೆ ಎಂದು ಸಾರ್ವಜನಿಕರ ಆಕ್ರೋಶ.

ಮಾನ್ಯ ಜಿಲ್ಲಾಧಿಕಾರಿಗಳು, ಜಿಲ್ಲಾ ಆರೋಗ್ಯಾಧಿಕಾರಿ (DHO) ಹಾಗೂ ತಾಲೂಕು ಆರೋಗ್ಯಾಧಿಕಾರಿ (THO) ತಕ್ಷಣ ಗಮನಹರಿಸಿ ಸಮಸ್ಯೆ ಪರಿಹರಿಸುವಂತೆ ಪ್ರಜ್ಞಾವಂತ ನಾಗರಿಕರ ಒತ್ತಾಯ.
“ಆಸ್ಪತ್ರೆಗಳ ಅಧಿಕೃತ ದೂರವಾಣಿ ಸಂಖ್ಯೆಗಳು ಸದಾ ಕಾರ್ಯನಿರ್ವಹಿಸುವಂತೆ ಕ್ರಮ ಕೈಗೊಳ್ಳಿ – ಜನರ ಆರೋಗ್ಯ ಸೇವೆಗೆ ಇದು ಅತ್ಯಗತ್ಯ”