Home Latest ಬೈಂದೂರು ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷರಾಗಿ BHK ಕುಮಾರ್ ಖಾರ್ವಿ ಆಯ್ಕೆ..!!

ಬೈಂದೂರು ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷರಾಗಿ BHK ಕುಮಾರ್ ಖಾರ್ವಿ ಆಯ್ಕೆ..!!

ಬೈಂದೂರು ವಲಯದ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ BHK ಕುಮಾರ್ ಖಾರ್ವಿ ಅವರು ಆಯ್ಕೆಯಾಗಿದ್ದಾರೆ.

ಆಯ್ಕೆಯಾದ ಬಳಿಕ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಮೀನುಗಾರರು ಎದುರಿಸುತ್ತಿರುವ ಎಲ್ಲಾ ಸಮಸ್ಯೆಗಳ ಬಗ್ಗೆ ಸಂಪೂರ್ಣವಾಗಿ ಸ್ಪಂದಿಸಿ, ಸಂಘದ ಅಭಿವೃದ್ಧಿ ಹಾಗೂ ಮೀನುಗಾರರ ಹಿತಾಸಕ್ತಿಗಾಗಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವುದಾಗಿ ಭರವಸೆ ನೀಡಿದರು. ಸಂಘದ ಸದಸ್ಯರು ಅವರಿಗೆ ಅಭಿನಂದನೆ ಸಲ್ಲಿಸಿ, ಯಶಸ್ವಿ ಅವಧಿಗೆ ಶುಭ ಹಾರೈಸಿದರು.