Home Kundapura News ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಡಿಕ್ಕಿ: ಪಾದಚಾರಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಡಿಕ್ಕಿ: ಪಾದಚಾರಿ ದುರ್ಮರಣ

ಕೋಟ, ಜೂ. 22: ಗಿಳಿಯಾರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 66ರ ಸರ್ವಿಸ್ ರಸ್ತೆಯಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಪಾದಚಾರಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.

ಮೃತರನ್ನು ಸತೀಶ ಆಚಾರ್ (45) ಎಂದು ಗುರುತಿಸಲಾಗಿದೆ. ಅವರು ರಾಷ್ಟ್ರೀಯ ಹೆದ್ದಾರಿ 66ನ್ನು ದಾಟಿ ರಸ್ತೆ ಅಂಚಿನತ್ತ ಬರುತ್ತಿದ್ದ ವೇಳೆ, ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದ KA-02-ML-6637 ಸಂಖ್ಯೆಯ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಅಪಘಾತದ ಪರಿಣಾಮ ಸತೀಶ ಆಚಾರ್ ಅವರ ತಲೆಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಅವರನ್ನು ಚಿಕಿತ್ಸೆಗೆ ಎನ್.ಆರ್. ಆಚಾರ್ಯ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.

ಈ ಸಂಬಂಧ ಕೋಟತಟ್ಟು ಗ್ರಾಮದ ಶೇಖರ (43) ಅವರು ನೀಡಿದ ದೂರಿನ ಆಧಾರದಲ್ಲಿ ಕೋಟ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 106/2026 ದಾಖಲಿಸಲಾಗಿದ್ದು, ಭಾರತೀಯ ನ್ಯಾಯ ಸಂಹಿತೆ (BNS) ಕಲಂ 281 ಮತ್ತು 106 ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.