ಕಾರ್ಕಳ: ಸಚ್ಚೇರಿಪೇಟೆಯ ಶ್ರೀ ಮಹಮ್ಮಾಯೀ ಅಮ್ಮನವರ ಅಶ್ವತ್ಥ ಕಟ್ಟೆಯಲ್ಲಿ ಫೆ.7ರ ಶನಿವಾರದಂದು ಸಾಯಂಕಾಲ ಗಂಟೆ 4ರಿಂದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಸೇವಾ ಟ್ರಸ್ಟ್ (ರಿ.) ಸಚ್ಚೇರಿಪೇಟೆ ಹಾಗೂ ಹಿಂದು ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ 22ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಮಹೋತ್ಸವ ಜರುಗಲಿದೆ. ರಾತ್ರಿ ಗಂಟೆ 7-30ಕ್ಕೆ ಮಹಾಪೂಜೆಯ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.
ರಾತ್ರಿ ಗಂಟೆ 8ಕ್ಕೆ ಧಾರ್ಮಿಕ ಸಭೆ ನಡೆಯಲಿದ್ದು, ಶ್ರೀ ಕ್ಷೇತ್ರ ಕೇಮಾರುವಿನ ಶ್ರೀ ಶ್ರೀ ಶ್ರೀ ಈಶ ವಿಠಲದಾಸ ಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದಾರೆ. ರಾತ್ರಿ ಗಂಟೆ 9ರಿಂದ ಅಭಿನಯ ಕಲಾವಿದರು ಉಡುಪಿ ಇವರಿಂದ “ಚಿಟ್ಟೆ” ಎಂಬ ಭಾವನಾತ್ಮಕ ತುಳು ಹಾಸ್ಯಮಯ ನಾಟಕ ಜರುಗಲಿದೆ ಎಂದು ಟ್ರಸ್ಟ್‌ನ ಅಧ್ಯಕ್ಷ ಹರೀಶ್ ಸಚ್ಚೇರಿಪೇಟೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



