Home Crime ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದ ನಕಲಿ ವೆಬ್ ಸೈಟ್ ತೆರೆದು ರೂಮ್ ಬುಕಿಂಗ್….!!

ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದ ನಕಲಿ ವೆಬ್ ಸೈಟ್ ತೆರೆದು ರೂಮ್ ಬುಕಿಂಗ್….!!

ದೇವಸ್ಥಾನದಿಂದ ದೂರು

ಕೊಲ್ಲೂರು: ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದ ಅಧಿಕೃತ ವೆಬ್‌ಸೈಟ್‌ http://karnatakatemplesaccommodation.com ಬದಲಿಗೆ karnataka temple accommodation ಎಂಬ ಹೆಸರಿನ ಅನಧಿಕೃತ ನಕಲಿ ವೆಬ್‌ಸೈಟ್‌ ನ್ನು ಅಕ್ರಮ ಲಾಭದ ಉದ್ದೇಶದಿಂದ ತೆರೆದು, ಹಲವಾರು ಜನರಿಗೆ ವಂಚಿಸಿರುವ ಬಗ್ಗೆ ಪ್ರಕರಣ ದಾಖಲಾಗಿದೆ.

ಈ ನಕಲಿ ವೆಬ್‌‌ಸೈಟ್‌ ಮೂಲಕ ಲಲಿತಾಂಬಿಕಾ ಅತಿಥಿ ಗೃಹದ ಕೊಠಡಿಯನ್ನು ಕಾಯ್ದಿರಿಸಿ ವಾಟ್ಸ್‌‌ಆಪ್‌‌‌ ಮೂಲಕ ಪೋನ್‌‌‌‌ ಪೇ ಕ್ಯೂ ಆರ್ ಕೋಡ್‌‌‌‌‌‌‌‌‌‌‌‌‌‌ನ್ನು ನೀಡಿ ಹಣವನ್ನು ಪಡೆದು ನಕಲಿ ರಶೀದಿ ನೀಡಿ ದೇವಳದ ಭಕ್ತರಿಗೆ ದೇವಳದ ಕೊಠಡಿಗಳನ್ನು ಕಾಯ್ದಿರಿಸಿ ಹಣ ಪಡೆದು ವಂಚಿಸಲಾಗುತ್ತಿತ್ತು ಎಂದು ತಿಳಿಯಲಾಗಿದೆ.

ಈ ನಕಲಿ ವೆಬ್‌ಸೈಟ್‌ ಜಾಲವನ್ನು ಪತ್ತೆ ಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ನೀಡಿದ ದೂರಿನಂತೆ ಕೊಲ್ಲೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣದ ದಾಖಲಿಸಿಕೊಳ್ಳಲಾಗಿದೆ.

ಕೊಲ್ಲೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.