ಸುರತ್ಕಲ್: ಪ್ರೀತಿಸುವ ನಾಟಕವಾಡಿ ಅಪ್ರಾಪ್ತ ಬಾಲಕಿಯೋರ್ವಳನ್ನು ಗರ್ಭಿಣಿಯನ್ನಾಗಿಸಿ ಕೈಕೊಟ್ಟ ಪರಿಣಾಮ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.
ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಗಂಜಿಮಠ ಮೂಲದ ಮನೀಶ್ ಪೂಜಾರಿ ಎಂಬಾತ ಪ್ರೀತಿ ಮಾಡುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದ. ಇದರಿಂದ ಆಕೆ ಗರ್ಭವತಿಯಾಗಿದ್ದಳು ಎಂದು ತಿಳಿದು ಬಂದಿದೆ.
ಈ ವಿಚಾರವನ್ನು ಆಕೆ ಅನೀಶ್ ಪೂಜಾರಿಗೆ ತಿಳಿಸಿದ್ದಳು. ಆದರೆ ಆತ ಅದನ್ನು ನಿರಾಕರಿಸಿ ಆಕೆಗೆ ಅವಾಚ್ಯ ಶಬ್ದಗಳಿಂದ ಬೈದಿದ್ದ ಎಂದು ಹೇಳಲಾಗಿದೆ.
ಅನೀಶ್ ಪೂಜಾರಿ ಕೈಕೊಟ್ಟ ಹಿನ್ನೆಲೆ ಜೂನ್ 22ರ ರಾತ್ರಿ ಆಕೆ ತನ್ನ ತಾಯಿಗೆ ಮಾಹಿತಿ ನೀಡಿದ್ದಳು. ಆಕೆಯನ್ನು ಸಮಾಧಾನ ಪಡಿಸಿದ್ದ ತಾಯಿ ಮರುದಿನ ಬೆಳಗ್ಗೆ ಕೆಲಸಕ್ಕೆ ತೆರಳಿ ಹಿಂದಿರುಗಿ ಮನೆಗೆ ಬಂದಾಗ ಮಗಳು ಮನೆಯ ಬೆಡ್ ರೂಮಿನ ಕೋಣೆಯ ಸೀಲಿಂಗ್ ಫ್ಯಾನ್ ಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದು ಬಂದಿದೆ.
ಘಟನಾ ಸಂಬಂದ ಬಾಲಕಿಯ ತಾಯಿ ಸುರತ್ಕಲ್ ಪೊಲೀಸರಿಗೆ ದೂರು ನೀಡಿದ್ದು, ಅದರಂತೆ ಆರೋಪಿ ಅನೀಶ್ ಪೂಜಾರಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ಪತ್ತೆಗೆ ಕ್ರಮವಹಿಸಿದ್ದಾರೆ.




