Home Karavali Karnataka ನವೆಂಬರ್ 8 ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಪ್ರತಿಭಾ ಪುರಸ್ಕಾರ ವಿತರಣೆ : ಯಶ್ ಪಾಲ್...

ನವೆಂಬರ್ 8 ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಪ್ರತಿಭಾ ಪುರಸ್ಕಾರ ವಿತರಣೆ : ಯಶ್ ಪಾಲ್ ಸುವರ್ಣ….!!

ಉಡುಪಿ: ಮಹಾಲಕ್ಷ್ಮೀ ಕೋ ಓಪರೇಟಿವ್ ಬ್ಯಾಂಕ್ ಉಡುಪಿ ಇದರ ವತಿಯಿಂದ ಉಡುಪಿ ಜಿಲ್ಲೆಯ ಬ್ಯಾಂಕಿನ ಸದಸ್ಯ ಹಾಗೂ ಸದಸ್ಯೇತರ ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಪದವಿ ಹಾಗೂ ಸ್ನಾತಕೋತ್ತರ ವಿಭಾಗದ 1,500 ಮಂದಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ರೂ. 25 ಲಕ್ಷ ಮೊತ್ತದ ಪ್ರತಿಭಾ ಪುರಸ್ಕಾರ ವಿತರಣೆ, 2026ನೇ ಸಾಲಿನ ಡೈರಿ ಬಿಡುಗಡೆ ಹಾಗೂ ಉಚ್ಚಿಲ ದಸರಾ ಮಹೋತ್ಸವದ ಚಿತ್ರ ಬಿಡಿಸುವ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಉಡುಪಿಯ ಪುರಭವನದಲ್ಲಿ ನವೆಂಬರ್ 08 ಶನಿವಾರ ಮಧ್ಯಾಹ್ನ 3.30ಕ್ಕೆ ಆಯೋಜಿಸಿರುವುದಾಗಿ ಬ್ಯಾಂಕಿನ ಅಧ್ಯಕ್ಷರಾದ ಉಡುಪಿ ಶಾಸಕ ಯಶ್‌ಪಾಲ್ ಎ. ಸುವರ್ಣ ತಿಳಿಸಿದ್ದಾರೆ.

ಬ್ಯಾಂಕಿನ ಅಧ್ಯಕ್ಷರಾದ ಯಶ್‌ಪಾಲ್ ಎ. ಸುವರ್ಣ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಸಮಾರಂಭವನ್ನು ಜಿ. ಶಂಕರ್ ಫ್ಯಾಮಿಲಿ ಟ್ರಸ್ಟಿನ ಪ್ರವರ್ತಕರಾದ ನಾಡೋಜ ಡಾ. ಜಿ. ಶಂಕರ್ ಉದ್ಘಾಟನೆ ನೆರವೇರಿಸಲಿದ್ದಾರೆ.

ಸಮಾರಂಭದಲ್ಲಿ ಪ್ರತಿಭಾ ಪುರಸ್ಕಾರವನ್ನು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಹರಿರಾಮ್ ಶಂಕರ್ ವಿತರಿಸಲಿದ್ದು ಬ್ಯಾಂಕಿನ 2026ನೇ ಸಾಲಿನ ಡೈರಿಯನ್ನು ಗೀತಾನಂದ ಫೌಂಡೇಶನ್ ಕೋಟ ಪ್ರವರ್ತಕರಾದ ಆನಂದ ಸಿ. ಕುಂದರ್ ಬಿಡುಗಡೆ ಮಾಡಲಿದ್ದಾರೆ.

ಸಮಾರಂಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ರಾಷ್ಟೀಯ ಮಟ್ಟದ ಜೆಸಿಐ ತರಬೇತುದಾರ ಕೆ. ರಾಜೇಂದ್ರ ಭಟ್ ರವರು ವಿದ್ಯಾರ್ಥಿಗಳಿಗೆ ಪ್ರೇರಣದಾಯಕ ಮಾತುಗಳನ್ನಾಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ದಿನಕರ ಹೇರೂರು, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷರಾದ ನಾರಾಯಣ ಜೆ. ಕರ್ಕೇರ, ಉದ್ಯಮಿ ಆನಂದ ಪಿ. ಸುವರ್ಣ, ಉಜ್ವಲ್ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕರಾದ ಅಜಯ್ ಪಿ. ಶೆಟ್ಟಿ, ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.