Home Crime ಪಡುಮಾರ್ನಾಡು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನೇಣು ಬಿಗಿದು ಆತ್ಮಹತ್ಯೆ…!!

ಪಡುಮಾರ್ನಾಡು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನೇಣು ಬಿಗಿದು ಆತ್ಮಹತ್ಯೆ…!!

ಮೂಡುಬಿದಿರೆ: ಪಡುಮಾರ್ನಾಡು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾಗಿದ್ದ ಶ್ರೀನಾಥ್ ಸುವರ್ಣ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಡುಮಾರ್ನಾಡಿನಲ್ಲಿ ನಡೆದಿದೆ.

ಮೂಲಗಳ ಪ್ರಕಾರ, ಶ್ರೀನಾಥ್ ಸುವರ್ಣ ಅವರು ಸ್ಮಶಾನದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲವಾದರೂ, ಶ್ರೀನಾಥ್ ಸುವರ್ಣ ಅವರು ಇತ್ತೀಚೆಗೆ ವ್ಯವಹಾರದಲ್ಲಿ ನಷ್ಟದಿಂದ ತೀವ್ರವಾಗಿ ಬಳಲುತ್ತಿದ್ದರು ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.

ಶ್ರೀನಾಥ್ ಸುವರ್ಣ ಅವರು ಗ್ರಾ.ಪಂ. ಅಧ್ಯಕ್ಷರಾಗಿ ಮಾಡಿದ ಕೆಲಸಗಳಿಂದಾಗಿ ಜನಪ್ರಿಯರಾಗಿದ್ದರು. ಮೃತರು ತಾಯಿ ಮತ್ತು ಪತ್ನಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.