Home Karavali Karnataka ಮಣಿಪಾಲದಲ್ಲಿ ನಡೆದ ಘಟನೆಯ ಬಗ್ಗೆ ಪೋಕ್ಸೊ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿರುವ ಪೊಲೀಸ್ ಇಲಾಖೆಯ ಕ್ರಮ...

ಮಣಿಪಾಲದಲ್ಲಿ ನಡೆದ ಘಟನೆಯ ಬಗ್ಗೆ ಪೋಕ್ಸೊ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿರುವ ಪೊಲೀಸ್ ಇಲಾಖೆಯ ಕ್ರಮ ಸ್ವಾಗತಾರ್ಹ : ಸಂಧ್ಯಾ ರಮೇಶ್….!!

ಉಡುಪಿ : ಮಣಿಪಾಲದಲ್ಲಿ ನಡೆದ ಘಟನೆಯ ಬಗ್ಗೆ ಪೋಕ್ಸೊ ಪ್ರಕರಣವನ್ನು ದಾಖಲಿಸಿ ಆರೋಪಿಯನ್ನು ಬಂಧಿಸಿರುವ ಪೊಲೀಸ್ ಇಲಾಖೆಯ ಕ್ರಮ ಸ್ವಾಗತಾರ್ಹ ಎಂದು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ತಿಳಿಸಿದ್ದಾರೆ.

ಪ್ರಸಕ್ತ ಕಾಲಘಟ್ಟದಲ್ಲಿ ಸಮಾಜದಲ್ಲಿ ಹೆಚ್ಚುತ್ತಿರುವ ಇಂತಹ ಸಾಮಾಜಿಕ ಪಿಡುಗನ್ನು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ತೀವ್ರವಾಗಿ ಖಂಡಿಸುತ್ತದೆ.

ಸಾಮಾಜಿಕ ಸ್ವಾಸ್ಥ್ಯವನ್ನು ಕಾಪಾಡುವ ನಿಟ್ಟಿನಲ್ಲಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನಾತ್ಮಕ ಕಟ್ಟುನಿಟ್ಟಿನ ಕ್ರಮಗಳನ್ನು ಜರಗಿಸುತ್ತಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಡೆ ಅಭಿನಂದನಾರ್ಹ ಎಂದು ಅವರು ತಿಳಿಸಿದ್ದಾರೆ.

ಇಂತಹ ಸನ್ನಿವೇಶದಲ್ಲಿ ಅನಗತ್ಯವಾಗಿ ರಾಜಕೀಯ ಪಕ್ಷದ ಹೆಸರನ್ನು ಅಪಪ್ರಚಾರಕ್ಕಾಗಿ ಬಳಸಿಕೊಳ್ಳುವ ಸಮಾಜ ಕಂಟಕರ ಕೀಳು ಮನಸ್ಥಿತಿ ಖಂಡನೀಯ. ಈ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿಯೊಂದಿಗೆ ಗೊಂದಲ ಸೃಷ್ಟಿಸುತ್ತಿರುವವರ ಬಗ್ಗೆಯೂ ಪೋಲಿಸ್ ಇಲಾಖೆ ಗಮನ ಹರಿಸುವುದು ಸೂಕ್ತ ಎಂದು ಸಂಧ್ಯಾ ರಮೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.