Home Crime ಎಂಡಿಎಂಎ ಮಾರಾಟ ಮಾಡಲು ಯತ್ನ : ಆರೋಪಿಯ ಬಂಧನ…!!

ಎಂಡಿಎಂಎ ಮಾರಾಟ ಮಾಡಲು ಯತ್ನ : ಆರೋಪಿಯ ಬಂಧನ…!!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಬೋಳಾರದ ಮುಳಿಹಿತ್ತು ಪ್ರದೇಶದಲ್ಲಿ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಪಾಂಡೇಶ್ವರ ಪೊಲೀಸ್ ಠಾಣೆ ಅಧಿಕಾರಿಗಳು ಹಾಗೂ ಸಿಬ್ಬಂದಿ ನಡೆಸಿದ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಬಂಧಿತ ಆರೋಪಿ ಕುಂಪಲ ಸುರಕ್ಷಾ ನಗರದ ನಿವಾಸಿ ಧನುಷ್ (29) ಎಂದು ತಿಳಿಯಲಾಗಿದೆ.

ಖಚಿತ ಮಾಹಿತಿಯ ಮೇರೆಗೆ ಪಾಂಡೇಶ್ವರ ಠಾಣೆ ಪೊಲೀಸರು ದಾಳಿ ನಡೆಸಿದ ವೇಳೆ ಆರೋಪಿಯ ಬಳಿಯಿಂದ 3.32 ಗ್ರಾಂ ಎಂಡಿಎಂಎ ಮಾದಕ ವಸ್ತು ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಯ ವಿರುದ್ಧ ಮಾದಕ ದ್ರವ್ಯ ಮತ್ತು ಮನೋವಿಕೃತ ಔಷಧಗಳ ನಿಯಂತ್ರಣ ಕಾಯ್ದೆ  ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಆರೋಪಿಯನ್ನು ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದ್ದಾರೆ.