Home Karavali Karnataka ಕಾಶ್ಮೀರ ಭಯೋತ್ಪಾದಕ ದಾಳಿ ಖಂಡಿಸಿ ಬೈಂದೂರು ಯುವ ಕಾಂಗ್ರೆಸ್‌ ಪ್ರತಿಭಟನೆ…!!

ಕಾಶ್ಮೀರ ಭಯೋತ್ಪಾದಕ ದಾಳಿ ಖಂಡಿಸಿ ಬೈಂದೂರು ಯುವ ಕಾಂಗ್ರೆಸ್‌ ಪ್ರತಿಭಟನೆ…!!

ಬೈಂದೂರು: ಕಾಶ್ಮೀರದ ಪಹಲ್ಲಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಪ್ರತಿಭಟನೆ ಹಾಗೂ ಸಂತಾಪ ಸಭೆ ಬೈಂದೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾದ ಅಕ್ಷಯ್ ಶೆಟ್ಟಿಯವರ ನೇತೃತ್ವದಲ್ಲಿ, ಯುವ ಕಾಂಗ್ರೆಸ್ ಕಾರ್ಯದರ್ಶಿ ಸೂರಜ್ ಜಿ ಪೂಜಾರಿಯವರ ಮಾರ್ಗದರ್ಶನದಲ್ಲಿ
ನಡೆಯಿತು.

ಈ ಸಂದರ್ಭದಲ್ಲಿ  ಮಾಜಿ ಶಾಸಕರಾದ ಕೆ. ಗೋಪಾಲ್ ಪೂಜಾರಿ, ಹಿರಿಯ ಕಾಂಗ್ರೆಸ್ ನಾಯಕರಾದ ಪ್ರಕಾಶ್ಚಂದ್ರ ಶೆಟ್ಟಿ, ಬೈಂದೂರು ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಮೋಹನ್ ಪೂಜಾರಿ, ರಾಜ್ಯ ಯುವ ಕಾಂಗ್ರೆಸ್‌ ಕಾರ್ಯದರ್ಶಿ ಸೂರಜ್ ಜಿ. ಪೂಜಾರಿ, ಬೈಂದೂರು ಪಪಂ ನಾಮನಿರ್ದೇಶಿತ ಸದಸ್ಯ ನಾಗರಾಜ ಗಾಣಿಗ, ಉಡುಪಿ ಜಿಲ್ಲಾ ಕಾಂಗ್ರೆಸ್‌ ವಕ್ತಾರರಾದ ವಿಕಾಸ್ ಹೆಗ್ಡೆ, ಬೈಂದೂರು ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಅರವಿಂದ ಪೂಜಾರಿ, ಬೈಂದೂರು ಬ್ಲಾಕ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಶಬ್ಬಿರ್ ಬೈಂದೂರು, ಕಿಸಾನ್ ಘಟಕದ ಅಧ್ಯಕ್ಷ ವೀರಭದ್ರ ಗಾಣಿಗ, ಸುಬ್ರಹ್ಮಣ್ಯ ಪೂಜಾರಿ ಯಡ್ತರೆ, ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗ ಉಪಾಧ್ಯಕ್ಷರಾದ ಕೆ. ಚಂದ್ರಶೇಖ‌ರ್ ಶೆಟ್ಟಿ, ಜಿಲ್ಲಾ ಯುವ ಕಾಂಗ್ರೆಸ್‌ ಉಪಾಧ್ಯಕ್ಷ ಪ್ರಮೋದ್ ಪೂಜಾರಿ ನಾವುಂದ, ಉಡುಪಿ ಜಿಲ್ಲಾ ಸಾಮಾಜಿಕ ಜಾಲತಾಣ ವಿಭಾಗದ ಅಧ್ಯಕ್ಷ ರೋಶನ್ ಶೆಟ್ಟಿ ಹಾಗೂ ವಿವಿಧ ನಾಯಕರು ಉಪಸ್ಥಿತರಿದ್ದರು.