Home Karavali Karnataka ಉಡುಪಿ ಲೋಕಾಯುಕ್ತ ಡಿವೈಎಸ್ಪಿಯಾಗಿ ಹಾಲಮೂರ್ತಿರಾವ್ ಅಧಿಕಾರ ಸ್ವೀಕಾರ…!!

ಉಡುಪಿ ಲೋಕಾಯುಕ್ತ ಡಿವೈಎಸ್ಪಿಯಾಗಿ ಹಾಲಮೂರ್ತಿರಾವ್ ಅಧಿಕಾರ ಸ್ವೀಕಾರ…!!

ಉಡುಪಿ: ಉಡುಪಿ ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕ (ಡಿವೈಎಸ್ಪಿ) ರಾಗಿ ವಿ.ಎಸ್.ಹಾಲಮೂರ್ತಿ ರಾವ್ ಶುಕ್ರವಾರ ಅಧಿಕಾರ ವಹಿಸಿಕೊಂಡಿದ್ದಾರೆ.

ಉಡುಪಿ ಠಾಣೆಯಲ್ಲಿ ಕಳೆದ ಸುಮಾರು ಒಂದು ವರ್ಷದಿಂದ ಡಿವೈಎಸ್‌ಪಿ ಹುದ್ದೆ ಖಾಲಿ ಇತ್ತು. ಈವರೆಗೆ ಪ್ರಭಾರ ಡಿವೈಎಸ್ಪಿಯಾಗಿ ನಿರೀಕ್ಷಕ ಮಂಜುನಾಥ್ ಕಾರ್ಯನಿರ್ವಹಿಸುತ್ತಿದ್ದರು.

ಇದೀಗ ಅಧಿಕಾರ ವಹಿಸಿಕೊಂಡಿರುವ ನೂತನ ಡಿವೈಎಸ್ಪಿ ಸಾರ್ವಜನಿಕರು ತಮ್ಮ ಯಾವುದೇ ದೂರುಗಳಿದ್ದಲ್ಲಿ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದ್ದಾರೆ.