Home Crime ಉಡುಪಿ: ಮಾದಕ ವಸ್ತು M.D.M.A ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ

ಉಡುಪಿ: ಮಾದಕ ವಸ್ತು M.D.M.A ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ

ಉಡುಪಿ : ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಮಲ್ಪೆಯ ಸಾರ್ವಜನಿಕ ಸ್ಥಳದಲ್ಲಿ ನಿಷೇದಿತ ಮಾದಕ ವಸ್ತು ಎಂ.ಡಿ.ಎಂ.ಎ ಹೊಂದಿದ್ದ ಹಾಗೂ ಕಾಪು, ಬ್ರಹ್ಮಾವರ, ಉಡುಪಿ, ಮಣಿಪಾಲದಲ್ಲಿರುವ ಕಾಲೇಜು ವಿಧ್ಯಾರ್ಥಿ ಹಾಗೂ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆರೋಪಿ ಸೈಯ್ಯದ್‌ ಮೊಹಮ್ಮದ್‌ ಮೆಹರಾಜ್‌ (19 ) ನನ್ನು ಪೊಲೀಸರು ಬಂಧಿಸಿದ್ದಾರೆ.

 

ಆತನಿಂದ 01 ಗ್ರಾಂ 03 ಮಿಲಿ ಗ್ರಾಂ ತೂಕದ ಎಂ.ಡಿ.ಎಂ.ಎ, ಎಂ.ಡಿ.ಎಂ.ಎ ಸಾಗಾಟಕ್ಕೆ ಬಳಸಿದ ಸ್ಕೂಟರ್ ಹಾಗೂ ಇತರೇ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

 

ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ : 68/2026 ಕಲಂ 8(C)̧ 22(b) NDPS ACT 1985 ರಂತೆ ಪ್ರಕರಣ ದಾಖಲಾಗಿದೆ.

 

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.