Home Crime ಲಾರಿ ಹಾಗೂ ಸ್ಕೂಟರ್ ನಡುವೆ ಅಪಘಾತ : ಸವಾರ ಸಾವು…!!

ಲಾರಿ ಹಾಗೂ ಸ್ಕೂಟರ್ ನಡುವೆ ಅಪಘಾತ : ಸವಾರ ಸಾವು…!!

ಕಾಸರಗೋಡು: ಲಾರಿ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರ ಮೃತಪಟ್ಟ ಘಟನೆ ಇಂದು (ಮಂಗಳವಾರ) ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರ ತೂಮಿನಾಡು ಎಂಬಲ್ಲಿ ಸಂಭವಿಸಿದೆ.

ಸಾವನ್ನಪ್ಪಿದವರು ಉಪ್ಪಳ ಐಲ ನಿವಾಸಿ ಕಲ್ಪೇಶ್ ಯು.(35) ಎಂದು ತಿಳಿದು ಬಂದಿದೆ.

ಇವರು ಉಪ್ಪಳದಿಂದ ಕೆ.ಸಿ ರೋಡ್ ನ ಪೇಪರ್ ಮಿಲ್ ಗೆ ಕೆಲಸಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಲ್ಲೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತದೇಹವನ್ನು ಮಂಗಲ್ಪಾಡಿ ಸರಕಾರಿ ಆಸ್ಪತ್ರೆ ಶವಾಗಾರದಲ್ಲಿರಿಸಲಾಗಿದೆ.

ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.