Home Crime ಪಣಪಿಲದಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ…!!

ಪಣಪಿಲದಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ…!!

ಮೂಡಬಿದಿರೆ: ತಾಲೂಕಿನ ಪಣಪಿಲ ಗ್ರಾಮದ ಹಳೆಯ ಮನೆಯಲ್ಲಿ ವ್ಯಕ್ತಿಯೊಬ್ಬರ ಕೊಳೆತ ಸ್ಥಿತಿಯಲ್ಲಿದ್ದ ಮೃತದೇಹ ಪತ್ತೆಯಾಗಿದೆ.

ಮೃತರನ್ನು ಅನಿಶ್ ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಅವರು ಸುಮಾರು ಒಂದು ವಾರದ ಹಿಂದೆಯೇ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ.

ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವುದರಿಂದ ಸ್ಥಳದಲ್ಲಿ ದುರ್ವಾಸನೆ ಹರಡಿದ್ದು, ಬಳಿಕ ಸ್ಥಳೀಯರು ವಿಷಯವನ್ನು ಪೊಲೀಸರಿಗೆ ತಿಳಿಸಿದ್ದಾರೆ.

ಪೊಲೀಸರು ಸ್ಥಳಕ್ಕೆ ಆಗಮಿಸಿಲ್ಲ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.