ವಿಟ್ಲ : ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಆಕ್ಷೇಪಾರ್ಹ ಕಮೆಂಟ್ ಮಾಡಿದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಂಗಳೂರಿನ ವಿದ್ಯಮಾನ್ಯ ನಗರದ ನಿವಾಸಿ ಆನಂದ್ ಎ. ಬಂಧಿತ ಆರೋಪಿ ಎಂದು ತಿಳಿಯಲಾಗಿದೆ.
ಫೇಸ್‌ಬುಕ್‌ನಲ್ಲಿ ಪ್ರಸಾರವಾಗಿದ್ದ ಪೋಸ್ಟ್ ಒಂದಕ್ಕೆ ‘ಸನಾತನಿ ಸಿಂಹ’ ಎಂಬ ಫೇಸ್‌ಬುಕ್ ಪೇಜ್ ಮೂಲಕ ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ಭಂಗ ತರುವಂತಹ ಆಕ್ಷೇಪಾರ್ಹ ಕಮೆಂಟ್ ಮಾಡಲಾಗಿತ್ತು. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಕಳೆದ ವರ್ಷ (ದಿನಾಂಕ: 18-09-353(2) BNS 2023 ರನ್ವಯ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ವಿಟ್ಲ ಸಬ್ ಇನ್ಸ್‌ಪೆಕ್ಟರ್ ಮತ್ತು ತಂಡವು ತಾಂತ್ರಿಕ ಹಾಗೂ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿ, ದಿನಾಂಕ 27-06-2026 ರಂದು ಆರೋಪಿ ಆನಂದ್‌ನನ್ನು ದಸ್ತಗಿರಿ ಮಾಡಿದ್ದಾರೆ. ದಸ್ತಗಿರಿ ಮಾಡಿದ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಪೊಲೀಸ್ ತನಿಖೆಯ ವೇಳೆ ಬಂಧಿತ ಆರೋಪಿ ಆನಂದ್ ಹಳೆಯ ಚಾಲಿ ಹೊಂದಿರುವ ವಿಚಾರ ಬೆಳಕಿಗೆ ಬಂದಿದೆ. ಈ ಹಿಂದೆ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಹಾಗೂ ಪ್ರಚೋದನಾಕಾರಿ ಸುದ್ದಿಗಳನ್ನು ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಈತನ ವಿರುದ್ಧ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 7 ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಶಾಂತಿ ಕದಡುವ ಹಾಗೂ ಕೋಮು ಪ್ರಚೋದನೆ ನೀಡುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಮುಂದುವರಿಯಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.




