ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯಾದ ದಿನ ರಾತ್ರಿ ರೌಡಿಶೀಟರ್ ಕೋಡಿಕೆರೆ ಲೋಕೇಶ್ ಹಾಗೂ ಗ್ಯಾಂಗ್ ಪ್ರತೀಕಾರಕ್ಕೆ ಯತ್ನಿಸಿತ್ತು. ಕುಂಟಿಕಾನ ಬಳಿ ಉಳ್ಳಾಲ ನಿವಾಸಿ ಲುಕ್ಮಾನ್ ಎಂಬ ಮೀನಿನ ವ್ಯಾಪಾರಿಯನ್ನು ಅಟ್ಟಾಡಿಸಿ ಕೊಲೆಗೆ ಯತ್ನಿಸಿತ್ತು. ಇನ್ನೋವಾ ಕಾರಿನಲ್ಲಿ ಬಂದು ದಾಳಿ ಮಾಡಿತ್ತು. ಇದೀಗ ಕಾವೂರು ಪೊಲೀಸರು ಲೋಕೇಶ್ನನ್ನು ಬಂಧಿಸಿದ್ದಾರೆ.
ಉಳ್ಳಾಲ ನಿವಾಸಿ ಲುಲ್ಮಾನ್ ಹಲ್ಲೆಗೊಳಗಾಗಿದ್ದ ಮೀನು ವ್ಯಾಪಾರಿ. ಮೀನುಗಾರ ಮಹಿಳೆ ಬೊಬ್ಬೆ ಹಾಕಿದ ಹಿನ್ನೆಲೆಯಿಂದಾಗಿ ಮೀನು ವ್ಯಾಪಾರಿ ಬಚಾವ್ ಆಗಿದ್ದ. ಇನ್ನೋವಾ ಕಾರಿನಲ್ಲಿ ಬಂದು ಲೋಕೇಶ್ ಗ್ಯಾಂಗ್ ಆತನ ಮೇಲೆ ಅಟ್ಯಾಕ್ ಮಾಡಿತ್ತು. ಈ ಹಿನ್ನಲೆಯಲ್ಲಿ ಪೊಲೀಸರು ಆತನನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಸುಹಾಸ್ ಶೆಟ್ಟಿ ಕೊಲೆ ನಂತರ ಮಂಗಳೂರಿನ ಮೂರು ಕಡೆ ಚಾಕು ಇರಿತ ಪ್ರಕರಣಗಳು ವರದಿಯಾಗಿದ್ದವು. ಒಟ್ಟಾರೆಯಾಗಿ 7 ಮಂದಿಯನ್ನು ಬಂಧಿಸಲಾಗಿತ್ತು. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ, ಮಂಗಳೂರಿನಲ್ಲಿ ಮತ್ತಿಬ್ಬರು ಹಿಂದೂ ಮುಖಂಡರಿಗೆ ಸಾಮಾಜಿಕ ಮಾಧ್ಯಮಗಳ ಮೂಲಕ ಬೆದರಿಕೆ ಹಾಕಲಾಗಿತ್ತು.