ಲಕ್ನೋ: ಫರಿದಾಬಾದ್ ಸ್ಫೋಟಕ ಪ್ರಕರಣ ಸಂಬಂಧ ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಮೌಲ್ವಿ ದಂಪತಿಯನ್ನು ಜಂಟಿ ಭದ್ರತಾ ಪಡೆಗಳು ಬಂಧಿಸಿವೆ.
ಶ್ರೀನಗರ ಪೊಲೀಸ್ ಮತ್ತು ಕೌಂಟರ್ ಇಂಟಲಿಜೆನ್ಸ್ ಕಾಶ್ಮೀರ ಜಂಟಿ ಕಾರ್ಯಾಚರಣೆ ನಡೆಸಿ, ಮೌಲ್ವಿ ಇಮಾಮ್ ಇರ್ಫಾನ್ ಅಹ್ಮದ್ ವಾಗೆಯನ್ನು ಬಂಧಿಸಿವೆ ಎಂದು ವರದಿಯಾಗಿದೆ.
ಆರೋಪಿಯ ಮನೆಯಿಂದ ಐದು ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆತನ ಪತ್ನಿಯನ್ನು ಶಂಕಿತ ಮೂಲಭೂತವಾದ ಸಂಪರ್ಕದ ಮೇಲೆ ಬಂಧಿಸಲಾಗಿದೆ.



