ಬಂಟ್ವಾಳ : ತಳ್ಳುಗಾಡಿಯಲ್ಲಿ ವ್ಯಾಪಾರ ನಡೆಸುತ್ತಿದ್ದ ವ್ಯಾಪಾರಿಯೋರ್ವರ ಅಂಗಡಿ ಸಾಮಾನುಗಳನ್ನು ಎಸೆದು ಜೀವ ಬೆದರಿಕೆ ಒಡ್ಡಿದ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹುಸೈನ್ ಕಲ್ಲಡ್ಕದಲ್ಲಿ ತಳ್ಳುವ ಗಾಡಿ ಇಟ್ಟುಕೊಂಡು ವ್ಯಾಪಾರ ನಡೆಸುತ್ತಿದ್ದು, ಅವರ ಪರಿಚಯದ ಜುನೈದ್ ಅಂಗಡಿಗೆ ಬಂದು ಸಾಮಾನುಗಳನ್ನು ಎಸೆದರು. ಇದನ್ನು ತಡೆಯಲು ಹೋದಾಗ ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




