Home Art & Culture ಕಾಪು ಶ್ರೀಹೊಸ ಮಾರಿಗುಡಿ ದೇವಸ್ಥಾನಕ್ಕೆ ನಟಿ ಶ್ರುತಿ ಭೇಟಿ…!!

ಕಾಪು ಶ್ರೀಹೊಸ ಮಾರಿಗುಡಿ ದೇವಸ್ಥಾನಕ್ಕೆ ನಟಿ ಶ್ರುತಿ ಭೇಟಿ…!!

ಕಾಪು: ಕನ್ನಡ ಚಿತ್ರರಂಗದ ಜನಪ್ರಿಯ ನಟಿ ಶ್ರುತಿ ಕುಟುಂಬ ಸಮೇತರಾಗಿ ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಸುಪ್ರಸಿದ್ದ ದೇಗುಲಗಳಿಗೆ ಭೇಟಿ ನೀಡಿದರು.

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರುಶನ ಪಡೆದರು.

ದೇವಳದ ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಗೌರವಿಸಲಾಯಿತು.

ದೇವಳದ ಪ್ರಧಾನ ತಂತ್ರಿ ವಿದ್ವಾನ್ ಕೆ.ಪಿ ಕುಮಾರ ಗುರು ತಂತ್ರಿ ಕೊರಂಗ್ರಪಾಡಿ ಶ್ರೀದೇವಿಯಲ್ಲಿ ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿದರು.

ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು ನಾನು ಇಲ್ಲಿನ ಅನೇಕ ದೇವಸ್ಥಾನಗಳಿಗೆ ಭೇಟಿ ನೀಡುವುದಿತ್ತು, ಜೊತೆಗೆ ಇಲ್ಲಿನ ಕಾಪು ಮಾರಿಯಮ್ಮ ದೇವಸ್ಥಾನದ ಬಗ್ಗೆ ಕೇಳಿದ್ದೆ, ದೇಗುಲ ಬಹಳ ಸುಂದರವಾಗಿ ಮೂಡಿ ಬಂದಿದೆ, ಕರಾವಳಿ ಭಾಗಕ್ಕೆ ಭೇಟಿ ನೀಡುವ ಯಾತ್ರಿಗಳು, ಪ್ರವಾಸಿಗರು ಇಲ್ಲಿಗೆ ಒಮ್ಮೆಯಾದರೂ ಭೇಟಿ ನೀಡಿ ಎಂದರು.

ಈ ಸಂದರ್ಭದಲ್ಲಿ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮತ್ತು ವ್ಯವಸ್ಥಾಪನಾ ಸಮಿತಿ ಸದಸ್ಯ ಮಾಧವ ಆರ್. ಪಾಲನ್, ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕ ಮತ್ತು ಘಂಟಾನಾದ ಸೇವಾ ಸಮಿತಿ ಅಧ್ಯಕ್ಷ ಯೋಗೀಶ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿಯ ಸದಸ್ಯ ರವೀಂದ್ರ ಮಲ್ಲಾರ್, ಚರಿತ ದೇವಾಡಿಗ, ಪ್ರಬಂಧಕ ಗೋವರ್ಧನ್ ಸೇರಿಗಾರ್ ಮೊದಲಾದವರು ಉಪಸ್ಥಿತರಿದ್ದರು.