ಉಡುಪಿ : ರಸ್ತೆ ಸುರಕ್ಷತಾ ಸಮಿತಿ ಸಭೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು.
ಈ ಸಭೆಯಲ್ಲಿ ಸಾರ್ವಜನಿಕ ವಾಹನಗಳು ಸುರಕ್ಷಿತ ಹಾಗೂ ಸುಗಮವಾಗಿ ರಸ್ತೆಗಳಲ್ಲಿ ಸಂಚರಿಸಲು ಅಗತ್ಯವಿರುವ ವೈಜ್ಞಾನಿಕ ಕ್ರಮಗಳ ಬಗ್ಗೆ ಚರ್ಚಿಸಲಾಯಿತು.
ಸರಕು ಸಾಗಣೆ ವಾಹನಗಳಿಗೆ 60 ಕಿ.ಮೀ ಪ್ರತೀ ಗಂಟೆಗೆ ವೇಗದ ಮಿತಿ ಅಳವಡಿಕೆ, ಸಿದ್ಧ ಕಾಂಕ್ರೀಟ್ ಮಿಕ್ಸಿಂಗ್ ವಾಹನಗಳು ಮತ್ತು ಮರಳು ಸಾಗಾಣಿಕೆ ವಾಹನಗಳ ಓವರ್ ಲೋಡ್ ನಿಯಂತ್ರಣ, ಶಾಲಾ-ಕಾಲೇಜುಗಳ ಪರಿಮಿತಿಯ ರಸ್ತೆಗಳಲ್ಲಿ ಸೂಚನಾ ಫಲಕಗಳ ಅಳವಡಿಕೆ ಕುರಿತು ಚರ್ಚಿಸಲಾಯಿತು.

ಪ್ರಯಾಣಿಕರು ಬಸ್‌ಗಳಲ್ಲಿ ಸಂಚರಿಸುವಾಗ ಕಸ ಸೇರಿದಂತೆ ನೀರಿನ ಬಾಟೆಲ್‌ಗಳನ್ನು ಎಸೆಯಲು ಬಸ್ಸಿನಲ್ಲಿಯೇ ಕಸದ ಬುಟ್ಟಿಗಳನ್ನು ಅಳವಡಿಸುವುದನ್ನು ಅನುಷ್ಠಾನ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಲಾಯಿತು.




