Home Crime 5 ಕೋಟಿ ವೆಚ್ಚದ ಪಡುಬಿದ್ರಿ ಪಡುಹಿತ್ಲು ಜಾರಂದಾಯ ದೈವಸ್ಥಾನ ರಸ್ತೆ ಮತ್ತು ಸೇತುವೆ ಕಾಮಗಾರಿ ಉದ್ಘಾಟನೆ…!!

5 ಕೋಟಿ ವೆಚ್ಚದ ಪಡುಬಿದ್ರಿ ಪಡುಹಿತ್ಲು ಜಾರಂದಾಯ ದೈವಸ್ಥಾನ ರಸ್ತೆ ಮತ್ತು ಸೇತುವೆ ಕಾಮಗಾರಿ ಉದ್ಘಾಟನೆ…!!

ಕಾಪು : ಕಾಪು ವಿಧಾನಸಭಾ ಕ್ಷೇತ್ರದ ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡುಬಿದ್ರಿ ಪಡುಹಿತ್ಲು ಜಾರಂದಾಯ ದೈವಸ್ಥಾನ ರಸ್ತೆ ಮತ್ತು ಸೇತುವೆ ಕಾಮಗಾರಿಗೆ 5 ಕೋಟಿ ರೂಪಾಯಿ ಅನುದಾನ ಮಂಜೂರಾಗಿದ್ದು ಕಾಮಗಾರಿ ಪೂರ್ಣಗೊಂಡಿದ್ದು ಇದರ ಉದ್ಘಾಟನೆಯನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್ ಅವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ, ಪಡುಬಿದ್ರಿ ಗ್ರಾಮ ಪಂಚಾಯತ್ ಸದಸ್ಯರಾದ ರವಿ ಶೆಟ್ಟಿ, ಮಹೇಂದ್ರ, ರವಿ ಶೆಟ್ಟಿ, ಸಂದೇಶ್, ಶೋಭಾ, ಯಶೋಧ, ವಿದ್ಯಾಶ್ರೀ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶಶಿಕಾಂತ್ ಪಡುಬಿದ್ರಿ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರಾದ ನೀತಾ ಗುರುರಾಜ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಶರಣ್ ಕುಮಾರ್ ಮಟ್ಟು, ಪಡುಬಿದ್ರಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಶಿವಪ್ರಸಾದ್ ಎಲ್ಲದಡಿ ಹಾಗೂ ಸ್ಥಳೀಯರು ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.