ಉಡುಪಿ ನಗರದ ಎರಡು ದೈವಸ್ಥಾನಗಳಲ್ಲಿ ನಡೆದಿದ್ದ ಕಾಣಿಕೆ ಡಬ್ಬಿ ಕಳವು ಪ್ರಕರಣದ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಬಾಗಲಕೋಟೆ ಮೂಲದ ಮುದುಕಪ್ಪ (27) ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ಪೊಲೀಸರು ಆರೋಪಿಯ ಚಲನವಲನಗಳನ್ನು ಪತ್ತೆಹಚ್ಚಿ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ಆರೋಪಿಯು ವಿವಿಧ ದೇವಸ್ಥಾನಗಳ ಹುಂಡಿ ಹಾಗೂ ಕಾಣಿಕೆ ಡಬ್ಬಿ ಕಳವು ಪ್ರಕರಣಗಳಲ್ಲಿಯೂ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.
ಈ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದು, ಇನ್ನಷ್ಟು ಕಳವು ಪ್ರಕರಣಗಳು ಬೆಳಕಿಗೆ ಬರುವ ಸಾಧ್ಯತೆ ಇದೆ.




