ಮಂಗಳೂರು: ಮಹಿಳೆಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಮಾಡಿ 1.81 ಕೋಟಿ ರೂ. ವಂಚಿಸಿರುವ ಘಟನೆ ವರದಿಯಾಗಿದೆ.
ಅ.24ರಂದು ಮಹಿಳೆಯೊಬ್ಬರ ಮೊಬೈಲ್‌ಗೆ ಅಪರಿಚಿತ ಕರೆ ಮಾಡಿದ್ದು, ಮುಂಬೈನ ಕೊಲಾಲ ಪೊಲೀಸ್ ಠಾಣೆಯಿಂದ ಕರೆ ಮಾಡುತ್ತಿರುವುದಾಗಿ ಮಹಿಳೆಯನ್ನು ನಂಬಿಸಿ ಆಕೆಯ ವಿರುದ್ಧ ಅಕ್ರಮ ಹಣ ವರ್ಗಾವಣೆ ಹಾಗೂ ಮಾನವ ಕಳ್ಳ ಸಾಗಾಣಿಕೆ ಮಾಡಿ ಕಮಿಷನ್ ತೆಗೆದುಕೊಂಡ ಆರೋಪವಿದೆ ಎಂದು ಹೇಳಿದ್ದಾರೆ ಎಂದು ಹೇಳಲಾಗಿದೆ.
ಇದರಿಂದ ಭಯಭೀತರಾದ ಮಹಿಳೆಗೆ ವೀಡಿಯೊ ಕಾಲ್ ಮಾಡಿ ಲೆಟರ್ ಬರೆಸಿಕೊಂಡು ವಾಟ್ಸಪ್ ನಂಬರ್ ವೊಂದಕ್ಕೆ ಕಳುಹಿಸಿಕೊಡುವಂತೆ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.
ವಿನೋದ್ ರಾಥೋಡ್ ಹಾಗೂ ರಾಜೇಶ್ ಮಿಶ್ರಾ ಎಂಬ ಅಪರಿಚಿತ ವ್ಯಕ್ತಿಗಳು ಪೊಲೀಸ್ ಅಧಿಕಾರಿಗಳೆಂದು ಪರಿಚಯಿಸಿ ವಾಟ್ಸಪ್ ವೀಡಿಯೊ ಕರೆ ಮಾಡಿ ಬ್ಯಾಂಕ್ ಖಾತೆಗಳ ಪರಿಶೀಲನೆ ಮಾಡಬೇಕು ಎಂದು ತಿಳಿಸಿದ್ದಾರೆ.
ಇದಾದ ಬಳಿಕ ನಮ್ಮಲ್ಲಿ ಹಣವನ್ನು ನೀಡಿದರೆ, ಪ್ರಕರಣ ಇತ್ಯರ್ಥವಾದ ಬಳಿಕ ವಾಪಾಸ್ ನೀಡುತ್ತೇವೆ ಎಂದು ನಂಬಿಸಿದ್ದಾರೆ. ಇದನ್ನು ನಂಬಿದ ಮಹಿಳೆ ಅ.28ರಿಂದ ನ.11ರವರೆಗೆ ಹಂತಹಂತವಾಗಿ 1.81ಕೋಟಿ ರೂ. ಆರ್ಟಿಜಿಎಸ್ ಮೂಲಕ ಹಣ ವರ್ಗಾವಣೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಈ ಕುರಿತು ವಂಚನೆಗೊಳಗಾದ ಮಹಿಳೆ ಸೈಬರ್ ಠಾಣೆಗೆ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಈ ದೂರಿನನ್ವಯ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



