Home Crime ಬಂಟ್ವಾಳ : ಇನೋವಾ ಕಾರ್ ಢಿಕ್ಕಿ : ಇಬ್ಬರು ಸ್ಥಳದಲ್ಲೇ ಸಾವು…!!

ಬಂಟ್ವಾಳ : ಇನೋವಾ ಕಾರ್ ಢಿಕ್ಕಿ : ಇಬ್ಬರು ಸ್ಥಳದಲ್ಲೇ ಸಾವು…!!

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪ ಇನೋವಾ ಕಾರೊಂದು ಬಿ.ಸಿ.ರೋಡ್ ಮುಖ್ಯ ವೃತ್ತಕ್ಕೆ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟು ಐವರು ಗಾಯಗೊಂಡಿರುವ ಘಟನೆ ಸಂಭವಿಸಿದೆ.

ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಶನಿವಾರ ಮುಂಜಾನೆ 5ರ ವೇಳೆಗೆ ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣ ಗುರು ವೃತ್ತಕ್ಕೆ ನೇರವಾಗಿ ಡಿಕ್ಕಿ ಹೊಡೆದಿದ್ದು , ಇಬ್ಬರು ಸ್ಥಳದಲ್ಲೇ ಮೃತಪಟ್ಟು ಐವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಅಪಘಾತದಿಂದ ಕಾರು ಸಂಪೂರ್ಣ ಜಖಂಗೊಂಡಿದೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಬೆಂಗಳೂರು ಮೂಲದವರು ಎನ್ನಲಾಗಿದ್ದು ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.

ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಬೇಟಿ ನೀಡಿ, ರಸ್ತೆಯಲ್ಲಿದ್ದ ವಾಹನವನ್ನು ತೆರವುಗೊಳಿಸಿದ್ದಾರೆ. ಪೊಲೀಸರು ಅಪಘಾತ ಪ್ರಕರಣ ದಾಖಲಿಸಿದ್ದಾರೆ.