ಮಂಜೇಶ್ವರ : ರಾತ್ರಿ ಹೊತ್ತಿನಲ್ಲಿ ಮನೆಗೆ ನುಗ್ಗಿದ ತಂಡ ಮಹಿಳೆ ಹಾಗು ಆಕೆಯ ಸ್ನೇಹಿತನ ವೀಡಿಯೋ ಚಿತ್ರೀಕರಿಸಿ ಬೆದರಿಕೆಯೊಡ್ಡಿರುವುದಾಗಿ ಮಂಜೇಶ್ವರ ಪೊಲೀಸರಿಗೆ ದೂರು ನೀಡಲಾಗಿದೆ.
ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ 27 ರ ಹರೆಯದ ಮಹಿಳೆ ನೀಡಿದ ದೂರಿನಂತೆ ಪೊಲೀಸರು ಕೇಸು ದಾಖಲಿಸಿ ಇಬ್ಬರನ್ನು ವಶಕ್ಕೆ ತೆಗೆದುಕೊಂಡಿದ್ದು ವಿಚಾರಣೆ ನಡೆಸುತ್ತಿದ್ದಾರೆ.




