Home Latest ಬೈಕ್ ಗೆ ಪಿಕಪ್ ಡಿಕ್ಕಿ: ಸವಾರ ಗಂಭೀರ

ಬೈಕ್ ಗೆ ಪಿಕಪ್ ಡಿಕ್ಕಿ: ಸವಾರ ಗಂಭೀರ

ಕೋಟ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರ ತಾಲೂಕಿನ ಮಾಬುಕಳ ಸರ್ಕಲ್ ನಲ್ಲಿ ಬೈಕ್ಗೆ ಪಿಕಪ್ ಡಿಕ್ಕಿಯಾಗಿ ಬೈಕ್ ಸವಾರನೋರ್ವ ಗಂಭೀರ ಗಾಯಗೊಂಡ ಘಟನೆ ಸೋಮವಾರ ಬೆಳಿಗ್ಗೆ ಸಂಭವಿಸಿದೆ.

 

ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ಮಾಬುಕಳ ನಿವಾಸಿ ಭಾಸ್ಕರ ಪೂಜಾರಿ ಎಂದು ಗುರುತಿಸಲಾಗಿದೆ.

 

ಭಾಸ್ಕರ ಪೂಜಾರಿ ಸಾಸ್ತಾನದಿಂದ ಮಾಬುಕಳ ಕಡೆ ಬರುತ್ತಿದ್ದ ವೇಳೆ ಉಡುಪಿ ಕಡೆಯಿಂದ ಅತೀವೇಗ ಹಾಗೂ ಅಜಾಗರೂಕತೆ ಚಲಾಯಿಸಿಕೊಂಡು ಬಂದ ಪಿಕಪ್ ವಾಹನವು ಬೈಕ್ಗೆ ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ.

 

ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

 

ಕೂಡಲೇ ಸ್ಥಳೀಯರು ಗಾಯಾಳುವಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಆ್ಯಂಬುಲೆನ್ಸ್ ಮೂಲಕ ಬ್ರಹ್ಮಾವರ ಆಸ್ಪತ್ರೆಗೆ ಕಳುಹಿಸಿದರು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಅವರನ್ನು ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ..

 

ಘಟನಾ ಸ್ಥಳಕ್ಕೆ ಕೋಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

 

ಈ ಕುರಿತು ಕೊಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.