Home Latest “ರೆಡ್ ಅಲರ್ಟ್” : ನಾಳೆ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ…!!

“ರೆಡ್ ಅಲರ್ಟ್” : ನಾಳೆ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ…!!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯು ‘ರೆಡ್ ಅಲರ್ಟ್’ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 2ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಆದೇಶಿಸಿದ್ದಾರೆ. ಮಳೆಯ ಆರ್ಭಟ ಮುಂದುವರಿಯುವ ಸಾಧ್ಯತೆ ಇರುವುದರಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ, ಪ್ರೌಢಶಾಲೆ, ಸರಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜಿಲ್ಲೆಯಾದ್ಯಂತ ಮಳೆಯಾಗುತ್ತಿದೆ. ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸೂಚನೆಯಿದ್ದು, ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿ, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಆದೇಶಿಸಿದ್ದಾರೆ ಎಂದು ತಿಳಿದು ಬಂದಿದೆ.

ಕರ್ನಾಟಕದಲ್ಲಿ ಮುಂಗಾರು ಚುರುಕಾಗುತ್ತಿದ್ದು, ಗುರುವಾರ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಅತಿ ಭಾರೀ ಮಳೆ ಎಂದು ರೆಡ್‌ ಅಲರ್ಟ್‌ ನೀಡಿದೆ. ಇನ್ನು ಒಳನಾಡಿ ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.