Home Crime ವಿಟ್ಲ ಬಸ್‌ಸ್ಟ್ಯಾಂಡ್ ಬಳಿ ಮಹಿಳೆಗೆ ಬೈಕ್ ಡಿಕ್ಕಿ : ಮಹಿಳೆ ಮೃತ್ಯು, ಬೈಕ್ ಸವಾರ ಗಂಭೀರ…!!

ವಿಟ್ಲ ಬಸ್‌ಸ್ಟ್ಯಾಂಡ್ ಬಳಿ ಮಹಿಳೆಗೆ ಬೈಕ್ ಡಿಕ್ಕಿ : ಮಹಿಳೆ ಮೃತ್ಯು, ಬೈಕ್ ಸವಾರ ಗಂಭೀರ…!!

ವಿಟ್ಲ:‌ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಬಸ್‌ಸ್ಟ್ಯಾಂಡ್ ಸಮೀಪ ಪುತ್ತೂರು ಕಡೆಗಿಂದ ಬರುತ್ತಿದ್ದ ಬೈಕ್ ಮಹಿಳೆಯೊಬ್ಬರಿಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದೆ.

ಡಿಕ್ಕಿಯಿಂದ ಗಾಯಗೊಂಡ ಮಹಿಳೆಯನ್ನು ವಿಟ್ಲ ಮುಡ್ನೂರು ಗ್ರಾಮದ ಮರುವಾಳ ನಿವಾಸಿ ಸೀತಾ ಶೆಟ್ಟಿ (68) ಎಂದು ಗುರುತಿಸಲಾಗಿದೆ. ತೀವ್ರ ಗಾಯಗಳಿಂದಾಗಿ ಅವರು ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರನನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಅಪಘಾತದ ನಂತರ ಬೈಕ್ ಸುಮಾರು 50 ಮೀಟರ್ ದೂರ ರಸ್ತೆಯಲ್ಲಿ ಎಳೆಯುತ್ತ ಹೋಗಿ ಬಿದ್ದಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಗಾಯಗೊಂಡು ಬಿದ್ದಿದ್ದ ಬೈಕ್ ಸವಾರನನ್ನು ಯಾರೂ ಮುಟ್ಟದೆ ಇದ್ದ ಸಂದರ್ಭ ಕಾಶಿಮಠ ನಿವಾಸಿ ಪ್ರತಾಪ್ ಅವರು ಮಾನವೀಯತೆ ಮೆರೆದಿದ್ದು, ತಮ್ಮ ದ್ವಿಚಕ್ರ ವಾಹನದಲ್ಲಿ ಗಾಯಾಳುವನ್ನು ತಕ್ಷಣ ಆಸ್ಪತ್ರೆಗೆ ಸೇರಿಸಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.