Home Latest ಜು. 5ರಂದು ಪೊಲೀಸ್ ಪರೀಕ್ಷೆಗೆ ಉಚಿತ ತರಬೇತಿ ಕಾರ್ಯಾಗಾರ..!

ಜು. 5ರಂದು ಪೊಲೀಸ್ ಪರೀಕ್ಷೆಗೆ ಉಚಿತ ತರಬೇತಿ ಕಾರ್ಯಾಗಾರ..!

ಕಾಪು : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ 3,395 ಹಾಗೂ ಸಶಸ್ತ್ರ ಪೊಲೀಸ್ ಕಾನ್‌ಸ್ಟೆಬಲ್ 1,421 ಹುದ್ದೆಗಳ ನೇಮಕಾತಿಗೆ ರಾಜ್ಯ ಸರಕಾರ ಅರ್ಜಿ ಆಹ್ವಾನಿಸಿರುವ ಹಿನ್ನೆಲೆಯಲ್ಲಿ ಲಿಖಿತ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿ ಗಳಿಗಾಗಿ ಜು. 5ರಂದು ಉಚಿತ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿದೆ.

ಕೋಟದ ಶಿವರಾಮ ಕಾರಂತ ಥೀಮ್ ಪಾರ್ಕ್‌ನಲ್ಲಿ ಬೆಳಗ್ಗೆ 9ರಿಂದ ಸಂಜೆ 5ರ ವರೆಗೆ ನಡೆಯಲಿರುವ ಈ ಕಾರ್ಯಾಗಾರವನ್ನು ವಿ-ಶೈನ್ ಕೋಚಿಂಗ್ ಸೆಂಟರ್ ಕೋಟ ಹಾಗೂ ಓಂ ಫ್ರೆಂಡ್ಸ್ ಕುಂದಾಪುರ ಅವರ

ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದೆ. ನೇಮಕಾತಿ ಪರೀಕ್ಷೆಗೆ ಅನುಭವಿ ಪೊಲೀಸ್ ಸಂಬಂಧಿಸಿದಂತೆ ಸಂಪನ್ಮೂಲ ವ್ಯಕ್ತಿಗಳು ಮಾರ್ಗದರ್ಶನ ನೀಡಲಿದ್ದಾರೆ.

ಶಿಬಿರದಲ್ಲಿ ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯೂ ಸೇರಿದಂತೆ ಉಡುಪಿ ಜಿಲ್ಲೆ ಹಾಗೂ ಕರಾವಳಿ ಭಾಗದ ಪೊಲೀಸ್ ನೇಮಕಾತಿ ಆಕಾಂಕ್ಷಿಗಳು ಹೆಚ್ಚಿನ ಸಂಖ್ಯೆ ಯಲ್ಲಿ ಭಾಗವಹಿಸಿ ಉಚಿತ ತರಬೇತಿಯ ಸದುಪಯೋಗ ಪಡೆದುಕೊಳ್ಳಬಹು ದಾಗಿದೆ. ಆಸಕ್ತರು 9980040551 ದೂರವಾಣಿ ಯನ್ನು ಸಂಪರ್ಕಿಸುವಂತೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.