ಬೆಳ್ತಂಗಡಿ : ಕಾಲೇಜು ವಿದ್ಯಾರ್ಥಿನಿಯೊಬ್ಬರು ಮನೆ ಎದುರಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದಲ್ಲಿ ಸಂಭವಿಸಿದೆ.
ಮೃತ ವಿದ್ಯಾರ್ಥಿನಿಯನ್ನು ನಿಖಿತಾ (19) ಎಂದು ತಿಳಿಯಲಾಗಿದೆ.
ನಿಖಿತಾ ಅವರು ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಕಾಂ. ವ್ಯಾಸಂಗ ಮಾಡುತ್ತಿದ್ದರು. ನಿಖಿತಾ ತಾಯಿಯೊಂದಿಗೆ ವಾಸವಾಗಿದ್ದು, ಬುಧವಾರ ಬೆಳಿಗ್ಗೆ ತಾಯಿ ಕೆಲಸಕ್ಕೆ ತೆರಳಿದ ವೇಳೆ ಮನೆಯಲ್ಲಿ ಒಬ್ಬಳೇ ಇದ್ದ ಅವರು ಮನೆ ಎದುರಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.




