Home Crime ಮಂಗಳೂರು : ಸಾಮಾಜಿಕ ಜಾಲತಾಣದಲ್ಲಿ ದ್ವೇಷಪೂರಿತ ಪೋಸ್ಟ್‌ ಮಾಡುವ ಮೊದಲು ಯೋಚಿಸಿ….!!

ಮಂಗಳೂರು : ಸಾಮಾಜಿಕ ಜಾಲತಾಣದಲ್ಲಿ ದ್ವೇಷಪೂರಿತ ಪೋಸ್ಟ್‌ ಮಾಡುವ ಮೊದಲು ಯೋಚಿಸಿ….!!

ಮಂಗಳೂರು ನಗರ ಪೊಲೀಸ್‌ ಕಮಿಷನರೇಟ್‌ನಿಂದ ಎಚ್ಚರಿಕೆ,..

ಮಂಗಳೂರು: ನಗರ ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯಲ್ಲಿ ಫೇಸ್‌ಬುಕ್‌, ಇನ್‌ಸ್ಟಾಗ್ರಾಂ, ವಾಟ್ಸಾಪ್‌ ಗ್ರೂಪ್‌ ಮತ್ತು ಇತರ ಸಾಮಾಜಿಕ ಜಾಲತಾಣಗಳಲ್ಲಿ ಕೋಮು ದ್ವೇಷ, ಸುಳ್ಳು ಮಾಹಿತಿ ಮತ್ತು ಬೆದರಿಕೆ ಸಂದೇಶಗಳನ್ನು ಹರಡುವ ಪ್ರಕರಣಗಳಲ್ಲಿ ತೀವ್ರ ಏರಿಕೆ ಕಂಡುಬಂದಿದೆ. ಪೊಲೀಸ್‌ ಇಲಾಖೆ ಇದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ ಎಂದು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌ ತಿಳಿದ್ದಾರೆ.

ಒಂದು ವಾರದಲ್ಲಿ ಇಂತಹ 30ಕ್ಕೂ ಹೆಚ್ಚು ಪ್ರಕರಣಗಳು ವಿವಿಧ ಠಾಣೆಗಳಲ್ಲಿ ದಾಖಲಾಗಿವೆ. ಈ ಪ್ರಕರಣಗಳನ್ನು ಸೆನ್‌ ಕ್ರೈಂ ಪೊಲೀಸ್‌ ಠಾಣೆಯ ಎಸಿಪಿ ನೇತೃತ್ವದ ವಿಶೇಷ ತಂಡ ತನಿಖೆ ನಡೆಸುತ್ತಿದ್ದು, ಈಗಾಗಲೇ ಹಲವು ಮಂದಿಯ ವಿಚಾರಣೆ ನಡೆಸಲಾಗಿದೆ. ಕೆಲವರು ನಕಲಿ ಪ್ರೊಫೈಲ್‌ಗ‌ಳು ಅಥವಾ ವಿದೇಶದಲ್ಲಿ ನೋಂದಾಯಿತ ಖಾತೆಗಳ ಮೂಲಕ ಸುಳ್ಳು ಪೋಸ್ಟ್‌ ಗಳನ್ನು ಹಾಕುತ್ತಿದ್ದಾರೆ. ಇಂತಹ ಖಾತೆಗಳನ್ನು ಪತ್ತೆ ಹಚ್ಚಲಾಗುವುದಿಲ್ಲ ಎಂಬ ಅಭಿಪ್ರಾಯವಿದೆ. ಆದರೆ ಎಲ್ಲೇ ಖಾತೆ ರಚಿಸಿದರೂ ಪತ್ತೆ ಹಚ್ಚಿ ಕ್ರಮ ಕೈಗೊಳ್ಳಬಹುದು. ಆದ್ದರಿಂದ ಯುವಜನರು ತಮ್ಮ ಭವಿಷ್ಯ ಮತ್ತು ಉದ್ಯೋಗವನ್ನು ಗಮನದಲ್ಲಿರಿಸಿ ಸಾಮಾಜಿಕ ಜಾಲತಾಣದಲ್ಲಿ ಬರೆಯುವ ಮೊದಲು ಎಚ್ಚರ ವಹಿಸಬೇಕು ಎಂದು ಆಯುಕ್ತರು ತಿಳಿಸಿದ್ದಾರೆ. ದ್ವೇಷ ಪೂರಿತ ಸಂದೇಶಗಳು ಬಂದರೆ ಅದನ್ನು ಫಾರ್ವರ್ಡ್‌ ಮಾಡುವ ಬದಲು ಸೆನ್‌ ಪೊಲೀಸ್‌ ಠಾಣೆಯನ್ನು ಸಂಪರ್ಕಿಸಿ ಮಾಹಿತಿ ನೀಡಬೇಕು ಎಂದಿದ್ದಾರೆ.

ಇಂತಹ ಪ್ರಕರಣಗಳನ್ನು ತಡೆಯಲು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್‌) ಕಲಂಗಳು 126 ಮತ್ತು 129 ಅಡಿಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ. ಆರೋಪಿ ಗಳಿಂದ ಮುಚ್ಚಳಿಕೆಗೆ ಸಹಿ ಹಾಕಿಸಲಾಗುತ್ತಿದೆ. ಅವರು ನಿರ್ದಿಷ್ಟ ಅವಧಿಗೆ ಉತ್ತಮ ನಡವಳಿಕೆಗೆ ಬಾಂಡ್‌ ಮೇಲೆ ಸಹಿ ಮಾಡಬೇಕು. ಈ ಅವ ಧಿಯಲ್ಲಿ ಅವರು ಪುನರಾವರ್ತನೆ ಮಾಡಿದರೆ ಮಾಡಿದರೆ ದಂಡ ಅಥವಾ ಜೈಲು ಶಿಕ್ಷೆಗೆ ಒಳಗಾಗುತ್ತಾರೆ.

ಮಂಗಳೂರನ್ನು ಶಾಂತ, ಕಾನೂನುಬದ್ಧ ಮತ್ತು ಏಕತೆಯ ನಗರವನ್ನಾಗಿಸಲು ಎಲ್ಲರ ಸಹಕಾರ ಅಗತ್ಯ. ಆದ್ದರಿಂದ ಸಾಮಾಜಿಕ ಜಾಲತಾಣಗಳನ್ನು ಬಳಸುವಾಗ ಜವಾಬ್ದಾರಿ ಯುತವಾಗಿ ನಡೆದುಕೊಳ್ಳಬೇಕು ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.